ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರಧ್ವಜ:ನಾಗೇಶ ಡೋಣೂರ
ವಿಜಯಪುರ,ಆ.9:ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕøತಿಯ ಜನರನ್ನು ಒಂದೇ ಧ್ವಜದಡಿಯಲ್ಲಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರಧ್ವಜ. ಈ ನಮ್ಮ ಸ್ವಾತಂತ್ರ್ಯ ದೇಶದ ಸಂಕೇತವಾಗಿರುವ ರಾಷ್ಟ್ರಧ್ವಜದ ಅವಹೇಳನ ರಾಷ್ಟ್ರದ್ರೋಹವಾಗಿರುತ್ತದೆ, ಎಂದು ಭಾರತ ಸೇವಾದಳದ ವಲಯ ಸಂಘಟಕ ನಾಗೇಶ ಡೋಣೂರ ಹೇಳಿದರು.
ಗುರುವಾರ ಭಾರತ ಸೇವಾದಳ ಜಿಲ್ಲಾ ಸಮಿತಿ, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಅರ್ಜುಣಗಿ ಇವರುಗಳ ಸಹಯೋಗದಲ್ಲಿ ಅರ್ಜುಣಗಿ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಚಲೇಜಾವ ಚಳುವಳಿಯ ಅಂಗವಾಗಿ ಆಯೋಜಿಸಲಾಗಿದ್ದ ಪಠ್ಯೇತರ ಹಾಗೂ ಕ್ರೀಡಾ ಚಟುವಟಿಕೆ ಉದ್ಘಾಟನೆ, ಸೇವಾದಳ ಘಟಕ ಉದ್ಘಾಟನೆ ಹಾಗೂ ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಕುರಿತಾದ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ರಾಷ್ಟ್ರಧ್ವಜದ ಉಳಿವಿಗಾಗಿ ಬಲಿದಾನವಾಗಲು ಸದಾ ಸಿದ್ಧವಾಗಿರುವ ನಾವುಗಳು ಅದರ ಮೇಲಿರುವ ಭಕ್ತಿಯನ್ನೇ ದೇಶಭಕ್ತಿ ಎನ್ನುತ್ತೇವೆ. ಅಂದಿನ ಪ್ರಧಾನಿಯಾಗಿದ್ದ ಜವಾಹರಲಾಲ್ ನೆಹರು 1947 ಜುಲೈ 22 ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರಧ್ವಜವನ್ನು ದೇಶಕ್ಕೆ ಅರ್ಪಿಸಿದರು. ನಮ್ಮ ಪವಿತ್ರ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ. ಎಲ್ಲಕ್ಕಿಂತ ಶ್ರೇಷ್ಠವಾದ ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ ಎಂಬ ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸುವದೇ ನಮ್ಮ ರಾಷ್ಟ್ರಧ್ವಜವನ್ನು ಮೇಲಕ್ಕೆ ಹಾರಿಸುವ ಉದ್ದೇಶ ಎಂದರು.
ಹಾಗೇ ಧ್ವಜಾರೋಹಣ, ಧ್ವಜ ಅವರೋಹಣ, ಧ್ವಜ ನೀತಿಸಂಹಿತೆ, ಹಾಗೂ ನಿಯಮಗಳ ಕುರಿತು ಕಾಲೇಜು ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ತಿಳಿಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಭಾರ ಪ್ರಾಚಾರ್ಯ ರುಕ್ಸಾನಾ ಎಂ ಆಯ್ ಮಾತನಾಡಿ, ಇಂದಿನ ಯುವಕರಲ್ಲಿ, ನಾಗರಿಕರಲ್ಲಿ ರಾμÁ್ಟ್ರಭಿಮಾನ ಕಡಿಮೆಯಾಗುತ್ತಿದ್ದು ಬೇಸರದ ಸಂಗತಿ, ಭಾರತ ಸೇವಾದಳ ಸಂಸ್ಥೆಯವರು ನಡೆಸಿಕೊಡುವ ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಕುರಿತಾದ ಮಾಹಿತಿ ಕಾರ್ಯಾಗಾರ ತುಂಬಾ ಉಪಯುಕ್ತವಾಗಿದ್ಧು ಆ ನಿಟ್ಟಿನಲ್ಲಿ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿಕೊಳ್ಳಲು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಕಾಲೇಜು ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. .
ಹಿರಿಯ ಉಪನ್ಯಾಸಕ ಹೆಚ್ ಬಿ ಪೂಜಾರಿ ಸ್ವಾಗತಿಸಿದರು. ಇನ್ನೋರ್ವ ಉಪನ್ಯಾಸಕ ಎಸ್.ಎಸ್. ನ್ಯಾಮಗೌಡ ಕಾರ್ಯಕ್ರಮ ನಿರೂಪಿಸಿದರು.