ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಸರಸ್ವತಿ ಮಹಾ ಪೂಜೆ
ತಾಳಿಕೋಟೆ:ಆ.9:ಪಟ್ಟಣದ ಶ್ರೀಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಸರಸ್ವತಿ ಮಹಾ ಪುಜಾ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರು ಒಗ್ಗೂಡಿ ಮಹಾ ಮಂತ್ರ ಪಠಣದೊಂದಿಗೆ ಮಾಡಲಾಯಿತು.
ಈ ಸಮಯದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎಸ್.ಎಂ.ಸಜ್ಜನ ಅವರು ಮಾತನಾಡಿ ವಿದ್ಯಾದೇವತಿಯ ಸರಸ್ವತಿ ಅವರ ಆದರ್ಶ ಮತ್ತು ಮೌಲ್ಯಗಳು ಇಂದಿನ ಸಮಾಜಕ್ಕೆ ಮತ್ತು ವಿದ್ಯಾಥಿಗಳಿಗೆ ಸ್ಪೂರ್ತಿದಾಯಕವಾಗಿದ್ದು ಅವರ ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡು ಮುನ್ನಡೆಯಬೇಕೆಂದರು.
ಈ ಸಮಯದಲ್ಲಿ ಸಂಸ್ಥೆಯ ಕಾಯದರ್ಶಿ ವಿವೇಕಾನಂದ ಸಜ್ಜನ, ಮುಖ್ಯಗುರುಗಳಾದ ಬಿ.ಜಿ.ಸಜ್ಜನ, ಆರ್.ಎಸ್.ದೇಸಾಯಿ, ದೈಹಿಕ ಶಿಕ್ಷಕ ಶಿವಾನಂದ ಸುಣದಳ್ಳಿ, ಪಿಯು ಕಾಲೇಜ್ ಪ್ರಾಚಾರ್ಯ ಕಿಶೋರಗೌಡ, ಸಿಬಿಎಸ್‍ಇ ಪ್ರಾಚಾರ್ಯ ಜಯಚಂದ್ರ, ಬಿಎಡ್ ಕಾಲೇಜ್ ಪ್ರಾಚಾರ್ಯ ಶ್ರೀಮತಿ ಜಿ.ಎನ್.ಪಾಟೀಲ, ಆಯ್.ಟಿ.ಆಯ್. ಕಾಲೇಜ್ ರಾಜು ಹಜೇರಿ, ಸರ್ವಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.