ಎರಡು ಕಾರುಗಳ ಮುಖಾಮುಖಿ ಡಿಕ್ಕಿ :ಆರು ಜನಕ್ಕೆ ಗಾಯ
ಕೊಲ್ಹಾರ:ಆ.9: ವಿಜಯಪುರ ಹುಬ್ಬಳ್ಳಿ ರಾಷ್ಟೀಯ ಹೆದ್ದಾರಿಯ ಹಳ್ಳದ ಗೆಣ್ಣೂರು ಕ್ರಾಸ್ ಹತ್ತಿರ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಆರು ಜನ ಗಾಯಗೊಂಡಿರುವ ಘಟನೆ ನಡೆದಿದೆ.
ವಿಜಯಪುರದಿಂದ ಬಾಗಲಕೋಟೆ ಹಾಗೂ ಬಾಗಲಕೋಟೆಯಿಂದ ವಿಜಯಪುರ ಕಡೆಗೆ ಹೋಗುವ ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. 6 ಜನ ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವವರ ಹೆಸರು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಕೊಲ್ಹಾರ ಠಾಣೆಯ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.