ಗ್ರಾಮೀಣ ಯುವ ಪತ್ರಕರ್ತರಿಗೆ ಅಕಾಡೆಮಿಯಿಂದ ಪ್ರೋತ್ಸಾಹ: ಆಯೀಷಾ ಖಾನಂ
ಬೀದರ್:ಆ.9: ಗ್ರಾಮೀಣ ಯುವ ಪತ್ರಕರ್ತರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪೆÇ್ರೀತ್ಸಾಹಿಸಲಿದೆ ಎಂದು ಅಕಾಡೆಮಿಯ ಅಧ್ಯಕ್ಷೆ ಆಯೀಷಾ ಖಾನಂ ತಿಳಿಸಿದರು.
ಗುರುವಾರ ರಾಜ್ಯ ರಾಜ್ಯಧಾನಿ ಬೆಂಗಳೂರಿನ ಮಾಧ್ಯಮ ಅಕಾಡೆಮಿ ಕಾರ್ಯಾಲಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯ ಘಟಕದಿಂದ ಸನ್ಮಾನಿತರಾಗಿ ಅವರು ಮಾತನಾಡಿದರು.
ಗ್ರಾಮೀಣ ಅದರಲ್ಲೂ ಕಲ್ಯಾಣ ಕರ್ನಾಟಕದ ಯುವಜನ ಪತ್ರಕರ್ತರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಿವಿಧ ಕಾರ್ಯಾಗಾರಗಳನ್ನು ಆಯೋಜಿಸುವುದು, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು, ಪತ್ರಿಕೋದ್ಯಮ ಪೆÇ್ರೀತ್ಸಾಹಿಸುವುದು, ಮಾಧ್ಯಮ ಅಧ್ಯಯನಕ್ಕೆ ಮನ್ನಣೆ ಸೇರಿದಂತೆ ಹತ್ತು ಹಲವು ರಚನಾತ್ಮಕ ಚಟುವಟಿಕೆಗಳನ್ನು ಆಯೋಜಿಸಲು ಆಕಾಡೆಮಿ ಸಿದ್ದವಿರುವುದಾಗಿ ಹೇಳಿದರು.
ಇದೇ ವೇಳೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿದರು.
ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ ಠಾಕೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಸದಸ್ಯರಾದ ಸುನಿಲ ಹೊನ್ನಾಳೆ ಜೊತೆಗಿದ್ದರು. ನಂತರ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯಿಷಾ ಖಾನಂ ಅವರು ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ ಠಾಕೂರ್ ಅವರನ್ನು ಸನ್ಮಾನಿಸಿದರು.