ಗೊಂಡ ಸಮಾಜದಿಂದ ಆಯ್ಕೆಯಾದ ಕೇಂದ್ರ ಸಚಿವರಿಗೆ, ಸಂಸದರಿಗೆ ದೆಹಲಿಯಲ್ಲಿ ಸನ್ಮಾನ
ಬೀದರ್ ಆ.09: ಗೊಂಡ ಸಮಾಜದಿಂದ ಕೇಂದ್ರ ಸಚಿವರಾಗಿ ಮತ್ತು ಸಂಸದರಾಗಿ ಆಯ್ಕೆಯಾದ ದೇಶದ ಗೊಂಡ ಸಮಾಜದ ಕೇಂದ್ರ ಸಚಿವರಿಗೆ ಮತ್ತು ಸಂಸದರಿಗೆ ಅಖಿಲ ಭಾರತೀಯ ಗೊಂಡ ಆದಿವಾಸಿ ಸಂಘ ಮತ್ತು ಕರ್ನಾಟಕ ಗೊಂಡ ಆದಿವಾಸಿ ಸಂಘಗಳ ಸಂಯುಕ್ತಾಶ್ರಯದಲ್ಲಿ ಬುಧವಾರ ದೆಹಲಿಯ ಅಶೋಕ ರಸ್ತೆಯಲ್ಲಿರುವ ವೈಡಬ್ಲ್ಯೂಸಿಎ ಹಾಲ್ ನಲ್ಲಿ ಸನ್ಮಾನ (ಅಭಿನಂದನಾ) ಸಮಾರಂಭ ನಡೆಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕಾಗಿನೆಲೆ ಮಹಾಸಂಸ್ಥಾನ, ಕಾಗಿನೆಲೆ ಗುರುಪೀಠ ತಿಂಥಿಣಿ ಬ್ರಿಡ್ಜ್ ನ ಪೂಜ್ಯರಾದ ಶ್ರೀ ಶ್ರೀ ಶ್ರೀ ಸಿದ್ದರಾಮನಂದ ಮಹಾಸ್ವಾಮೀಜಿಗಳು, ಅಧ್ಯಕ್ಷತೆಯನ್ನು ಸಂಘದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಸಂಸದ ಫಗ್ಗನ್ ಸಿಂಗ್ ಕುಲಸ್ತೆರವರು ವಹಿಸಿದ್ದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾಗಿರುವ ಪ್ರಹ್ಲಾದ್ ಜೋಷಿ, ವಿ. ಸೋಮಣ್ಣ, ಗೊಂಡ ಸಮಾಜದಿಂದ ಆಯ್ಕೆಯಾದ ಸಂಸದರು, ಕೇಂದ್ರ ಸಚಿವರು, ಬೀದರ್, ಕಲಬುರಗಿ, ಯಾದಗಿರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಗೊಂಡ ಸಮಾಜದ ಮುಖಂಡರು, ವಿವಿಧ ರಾಜ್ಯಗಳ ಗೊಂಡ ಸಮಾಜದ ಮುಖಂಡರು ಸೇರಿದಂತೆ ಅನೇಕರಿದ್ದರು.