ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ವಿ ಜಿ ಪದವಿ ಪೂರ್ವ ಉಪನ್ಯಾಸಕಿ ಬಸಮ್ಮ ಎಸ್. ಚೋರಗಿ
ಕಲಬುರಗಿ:ಸೆ.30: ನಗರದ ಪ್ರತಿಷ್ಠಿತ ಹೈ.ಕ.ಶಿ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಶ್ರೀಮತಿ ಬಸಮ್ಮ ಎಸ್. ಚೋರಗಿ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಅತ್ಯಮೂಲ್ಯವಾದ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ ಕಲಬುರಗಿ ಸಾಂಸ್ಕ್ರತಿಕ ಪ್ರತಿಷ್ಠಾನ(ರಿ) ಕೊಡಮಾಡುವ 2024ನೇ ಸಾಲಿನ ಜಿಲ್ಲಾ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿ ದಿನಾಂಕ 29.09.2024 ರಂದು ಕಲಬುರಗಿಯ ಸೇಂಟ್ ಮೇರಿ ಸಭಾ ಭವನದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಉಪನ್ಯಾಸಕರಾದ ಶ್ರೀಮತಿ ಬಸಮ್ಮ ಎಸ್. ಚೋರಗಿ ಅವರ ಸಾಧನೆಗೆ ಎಚ್‍ಕೆಇ ಸೊಸೈಟಿ ಅಧ್ಯಕ್ಷರಾದ ಶ್ರೀ ಶಶಿಲ್ ಜಿ ನಮೋಶಿ, ಉಪಾಧ್ಯಕ್ಷ ರಾಜಾ ಭೀಮಳ್ಳಿ, ಕಾರ್ಯದರ್ಶಿ ಉದಯ ಚಿಂಚೋಳಿ, ಜಂಟಿ ಕಾರ್ಯದರ್ಶಿ ಕೈಲಾಸ ಪಾಟೀಲ ಹಾಗೂ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರಾದ ಡಾ. ಮೋಹನರಾಜ ಪತ್ತಾರ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿ ಅವರನ್ನು ಅಭಿನಂದಿಸಿದರು ಎಂದು ಎಂದು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪತ್ರಿಕಾ ಮಾಧ್ಯಮದ ಸಂಯೋಜಕರಾದ ಶ್ರಿ. ಐ. ಕೆ. ಪಾಟೀಲ ಪತ್ರಿಕಾ ಪ್ರಕಟಣೆಗಾಗಿ ತಿಳಿಸಿದ್ದಾರೆ.