ಶೈಕ್ಷಣಿಕ ಪ್ರಗತಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಬಳಸಿಕೊಳ್ಳಿ:ಮಾಳಂಜಿ
ಅಫಜಲಪುರ: ಆ.9:ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಮಸ್ಯೆ ಎದುರಾದ ಹಿನ್ನೆಲೆ ಇದರ ನಿರ್ಮೂಲನೆಗಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಲು ಸುಜ್ನಾನ ನಿಧಿ ಶಿಷ್ಯವೇತನ ಕಲ್ಪಿಸಿದ್ದು ಇದರ ಪ್ರಯೋಜನವನ್ನು ಅರ್ಹ ಫಲಾನುಭವಿಗಳು ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಜಿಲ್ಲಾ ನಿರ್ದೇಶಕ ಗಣಪತಿ ಮಾಳಂಜಿ ತಿಳಿಸಿದರು.
ಪಟ್ಟಣದ ಮಾತೋಶ್ರೀ ಮನೋರಮಾ ಮಧ್ವರಾಜ ಅನುದಾನಿತ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಾಗೂ ತಾಲೂಕಿನಲ್ಲಿ ಆಯ್ಕೆಯಾದ ಪ್ರತಿಭಾವಂತ 25 ಜನ ವಿದ್ಯಾರ್ಥಿಗಳಿಗೆ ಸುಜ್ನಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದ ಅವರು ಈಗಾಗಲೇ ಧರ್ಮಸ್ಥಳ ಸಂಸ್ಥೆಯ ವತಿಯಿಂದ ಸುಜ್ಞಾನ ನಿಧಿ ಶಿಷ್ಯ ವೇತನ ರೂಪದ ಅಡಿಯಲ್ಲಿ ರಾಜ್ಯದ 97 ಸಾವಿರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 114 ಕೋಟಿ ರೂ. ವಿನಿಯೋಗಿಸಲಾಗಿದೆ.
ಎಸ್. ಎಸ್. ಎಲ್. ಸಿ ನಂತರದ
ವೃತ್ತಿಪರ ಹಾಗೂ ತಾಂತ್ರಿಕ ಕೋರ್ಸುಗಳನ್ನು ಪಡೆದ ಅರ್ಹ ಫಲಾನುಭವಿಗಳು ನಿರುದ್ಯೋಗದ ಸಮಸ್ಯೆ ಎದುರಿಸಬಾರದು ಹಾಗೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸ್ವಾವಲಂಬಿಗಳಾಗಿ ಬದುಕಲು ಈ ಶಿಷ್ಯವೇತನ ನೀಡಲಾಗಿದೆ. ಹೀಗಾಗಿ ಇದರ ಪ್ರಯೋಜನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಪ್ರಾಸ್ತಾವಿಕವಾಗಿ ತಾಲೂಕು ಯೋಜನಾಧಿಕಾರಿ ಶಿವರಾಜ್ ಆಚಾರ್ಯ ಧರ್ಮಸ್ಥಳ ಸಂಸ್ಥೆಯ ಯೋಜನೆಯ ಉದ್ದೇಶಗಳ ಕುರಿತು ವಿವರಿಸಿದರು.
ಕಾರ್ಯಕ್ರಮ ಉದ್ದೇಶಿಸಿ ಸಂಸ್ಥೆಯ ಕಾರ್ಯದರ್ಶಿ ಬಸವರಾಜ ಸಪ್ಪನಗೋಳ, ಜನಜಾಗೃತಿ ವೇದಿಕೆಯ ಸದಸ್ಯರಾದ ಶೈಲೇಶ ಗುಣಾರಿ, ಡಾ. ರಾಜೇಶ ಆಲಮೇಲಕರ್ ಮಾತನಾಡಿದರು.
ಅಧ್ಯಕ್ಷತೆಯನ್ನು ಕೋಲಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಯಂಕಂಚಿ ವಹಿಸಿಕೊಂಡರು.
ಮುಖ್ಯ ಅತಿಥಿಗಳಾಗಿ ಎಸ್.ಎಂ ಕರಿಕಲ್, ಚಿನ್ನು ಮನಿಯಾರ, ಪತ್ರಕರ್ತ ಅರುಣಕುಮಾರ ಹೂಗಾರ ಆಗಮಿಸಿದ್ದರು. ಇದೇ ವೇಳೆ ದುಶ್ಚಟಗಳಿಂದ ದೂರವಿರಲು ಯುವಕರ ಮೇಲೆ ಪರಿಣಾಮ ಬೀರುವ ವಿಶೇಷ ವಿಡಿಯೋ ಚಿತ್ರಿಕರಣವೊಂದನ್ನು ಪೆÇ್ರಜೆಕ್ಟರ್ ಮೂಲಕ ವಿದ್ಯಾರ್ಥಿಗಳಿಗೆ ತೋರ್ಪಡಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕ ಸಿಬ್ಬಂದಿ ವರ್ಗ, ಪೆÇೀಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.