ಬೆಳೆ ಹಾನಿ ಪರಿಹಾರ ಮತ್ತು ಕಬ್ಬಿನ ಬಿಲ್ಲು ಪಾವತಿಸಲು ಜಿಲ್ಲಾ ರೈತ ಸಂಘ ಮನವಿ
ಬೀದರ:ಆ.9: ಜಿಲ್ಲೆಯಲ್ಲಿ 2023-24ನೇ ಸಾಲಿನ ಬರಗಾಲ ಘೋಷಣೆಯಾದರೂ ಕೂಡ ಇಲ್ಲಿಯವರೆಗೆ ಬಹಳಷ್ಟು ರೈತರನ್ನು ಬೆಳೆ ಹಾನಿ ಪರಿಹಾರ ಸಿಕ್ಕಿರುವುದಿಲ್ಲ. ಹಲವಾರು ಸಲ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೂ ಇಲ್ಲಿಯವರೆಗೆ ಈ ಸಮಸ್ಯೆ ಬಗೆಹರಿದಿಲ್ಲ ಹಾಗೂ ಬೀದರ ಜಿಲ್ಲೆಯಲ್ಲಿ ಭಾಲ್ಕೇಶ್ವರ ಸಕ್ಕರೆ ಕಾರ್ಖಾನೆ ಮತ್ತು ಬೀದರ ಕಿಸಾನ್ ಸಕ್ಕರೆ ಕಾರ್ಖಾನೆ (ಃಏSಏ) ಈ ಎರಡೂ ಕಾರ್ಖಾನೆಯವರು ಇಲ್ಲಿಯವರೆಗೆ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿರುವ ಕೆಲವು ರೈತರಿಗೆ ಹಣ ಪಾವತಿಸದೇ ಬಾಕಿ ಉಳಿಸಿಕೊಂಡಿರುತ್ತಾರೆ. ಈ ವಿಷಯ ಗಂಭೀರವಾಗಿ ಪರಿಗಣಿಸಿ, ಅತೀ ಶೀಘ್ರದಲ್ಲಿ ಬಾಕಿ ಉಳಿದಿರುವ ರೈತರ ಖಾತೆಗೆ ಹಣ ಪಾವತಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಒತ್ತಾಯಿಸಿ ಇಂದು ಜಿಲ್ಲಾ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕಷರಾದ ಸಿದ್ರಾಮಪ್ಪಾ ಆಣದೂರೆ, ಕಾರ್ಯಾಧ್ಯಕ್ಷರಾದ ಶ್ರೀಮಂತ ಬಿರಾದಾರ, ಜಿಲ್ಲಾ ಪ್ರ.ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ಪ್ರವೀಣ ಕುಲಕರ್ಣಿ, ಚಂದ್ರಶೇಖರ ಜಮಖಂಡಿ, ಶಂಕರೆಪ್ಪ ಪಾರಾ, ಪ್ರಕಾಶ ಬಾವಗೆ, ನಾಗಯ್ಯ ಸ್ವಾಮಿ, ಸುಭಾಷ ರಗಟೆ, ರಾಮರಾವ ಕೇರೂರೆ, ವಿಶ್ವನಾಥ ಧರಣೆ, ರೇವಣಸಿದಪ್ಪಾ ಯರಬಾಗ, ಝರಣಪ್ಪ ದೇಶಮುಖ, ಮಲ್ಲಿಕಾರ್ಜುನ ಚಕ್ಕಿ, ಬಸಪ್ಪಾ ಆಲೂರೆ ಉಪಸ್ಥಿತರಿದ್ದರು.