ನಾಲೆ ಇಂದ ಸಿಎಂ ಸಿದ್ದರಾಮಯ್ಯರಿಂದ ರಾಚಯ್ಯ ಅವರ ಸ್ಮಾರಕ ಉದ್ಘಾಟನೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಆ.09- ತಾಲ್ಲೂಕಿನ ಆಲೂರು ಗ್ರಾಮದಲ್ಲಿ 4.75 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಮಾಜಿ ರಾಜ್ಯಪಾಲ ದಿ. ಬಿ. ರಾಚಯ್ಯ ಅವರ ಸ್ಮಾರಕವನ್ನು ಆ. 10 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದ್ದಾರೆ.
ಅವರು ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ, ಆ. 10 ರಂದು ಬಿ. ರಾಚಯ್ಯ ಸ್ಮಾರಕ ಉದ್ಘಾಟನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಈ ಎರಡು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಶಿಷ್ಯನಿಂದ ಸ್ಮಾರಕ ಉದ್ಗಾಟನೆ :
ಬಿ.ರಾಚಯ್ಯ ಅವರ ರಾಜಕೀಯವಾಗಿ ಅನೇಕರನ್ನು ಗುರುತಿಸಿ ಅವರ ಬೆಳವಣಿಗೆಗೆ ಕಾರಣಕರ್ತರಾಗಿದ್ದಾರೆ. ಆದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯವಾಗಿ ಬೆಳೆಯಲು ಬಿ.ರಾಚಯ್ಯ ಅವರು ಕಾರಣರು. ಅವರನ್ನು ಶಾಸಕರಾನ್ನಾಗಿ ಮಾಡಿದ್ದು, ಕಾವಲು ಪಡೆ ಅಧ್ಯಕ್ಷರನ್ನಾಗಿ ಮಾಡಿದ್ದು, ಪ್ರಥಮ ಬಾರಿ ರಾಮಕೃಷ್ಟ ಹೆಗಡೆ ಅವರ ಸಂಪುಟದಲ್ಲಿ ಸಿದ್ದರಾಮಯ್ಯ ಅವರು ಸಚಿವರಾಗಲು ಬಿ. ರಾಚಯ್ಯ ಅವರು ಶಿಫಾರಸ್ಸು ಮಾಡಿದ್ದರು. ಹೀಗಾಗಿ ಸಿದ್ದರಾಮಯ್ಯ ಅವರು 2013ರಲ್ಲಿ ಸಿಎಂ ಆಗಿದ್ದ ಅವಧಿಯಲ್ಲಿ 1 ಕೋಟಿ ರೂ. ನೀಡಿ, ಸ್ಮಾರಕ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಈಗ ಅವರ ಮತ್ತೇ ಸಿಎಂ ಆಗಿದ್ದು, ಹೆಚ್ಚುವರಿ ಅನುದಾನವನ್ನು ನೀಡಿ, ಸ್ಮಾರಕ ಪೂರ್ಣಗೊಳಿಸಿ, ಆ. 10 ರಂದು ರಾಚಯ್ಯ ಅವರ 102 ಜನ್ಮ ದಿನೋತ್ಸವದಂದು ಸ್ಮಾರಕವನ್ನು ಲೋಕಾರ್ಪಣೆ ಮಾಡುವ ಮೂಲಕ ರಾಜಕೀಯ ಗುರುವಿನ ಋಣ ತೀರಿಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಅವರ ಬಹಳಷ್ಟು ವೇದಿಕೆಯಲ್ಲಿ ಈ ಎಲ್ಲಾ ವಿಚಾರಗಳನ್ನು ಸ್ವತಃ ಪ್ರಸ್ತಾಪ ಮಾಡಿದ್ದಾರೆ ಎಂದು ಕೃಷ್ಣಮೂರ್ತಿ ತಿಳಿಸಿದರು.
ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಹೊಂಗನೂರು ಚಂದ್ರು, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಜಿ.ಪಂ. ಮಾಜಿ ಸದಸ್ಯ ಸದಾಶಿವಮೂರ್ತಿ, ಕನಿಷ್ಟ ವೇತನ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ ಉಮೇಶ್ ಎಸ್‍ಪಿಕೆ ಇದ್ದರು.