ಕಟ್ಟಡ ಕಾರ್ಮಿಕರಿಗೆ ಕಳಪೆ ಸಾಮಗ್ರಿ ವಿತರಣೆ: ಆಕ್ರೋಶ
ಕಲಬುರಗಿ,ಆ.8-ಸರಕಾರ ಕಟ್ಟಡ ಕಾರ್ಮಿಕರಿಗೆ ವಿತರಿಸುವ ಸಾಮಗ್ರಿ ಕಳಪೆಯಾಗಿವೆ ಎಂದು ನವಕಲ್ಯಾಣ ಕರ್ನಾಟಕ ಕಾರ್ಮಿಕರ ಸಂಘದ ಅಧ್ಯಕ್ಷ ಭೀಮರಾಯ ಕಂದಳ್ಳಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಕಟ್ಟಡ ಕಾರ್ಮಿಕರ ಮುಖಂಡರಿಗೆ ಕರೆದಿದ್ದ ಸಾಮಗ್ರಿಗಳ ಪರಿಶಿಲನಾ ಸಭೆಯಲ್ಲಿ ಮಾತನಾಡಿದ ಅವರು, ಕಟ್ಟಡ ಕಾರ್ಮಿಕರಿಗೆ ವಿತರಿಸುವ ಎಲ್ಲಾ ಸಾಮಗ್ರಿಗಳು ಸಂಪೂರ್ಣ ಕಳಪೆ ಗುಣಮಟ್ಟದ್ದಾಗಿವೆ. ಸದರಿ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಂಡು ಬರುತ್ತಿದೆ. ಕಳಪೆ ಸಾಮಗ್ರಿಗಳನ್ನು ತಕ್ಷಣ ವಾಪಸ್ಸು ಮಾಡಿ ಗುಣಮಟ್ಟದ ಸಾಮಗ್ರಿಗಳನ್ನು ಖರೀದಿಸಿ ಕಟ್ಟಡ ಕಾರ್ಮಿಕರಿಗೆ ವಿತರಿಸಬೇಕೆಂದು ಒತ್ತಾಯಿಸಿದರು. ಒಂದು ವೇಳೆ ಕಾರ್ಮಿಕ ಇಲಾಖೆ ಇದಕ್ಕೆ ಸ್ಪಂದಿಸದಿದ್ದರೆ ಮುಂಬರುವ ದಿನಗಳಲ್ಲಿ ಕಾರ್ಮಿಕ ಇಲಾಖೆಯ ಎದುರುಗಡೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಗೌರವಾಧ್ಯಕ್ಷರಾದ ರಾಜು ಜಮಾದಾರ, ಮುಖಂಡರಾದ ಶಿವುಕುಮಾರ ಬೆಳಗೇರಿ, ಮಹಾಂತೇಶ ದೊಡ್ಡಮನಿ, ಮರೆಪ್ಪ ರೊಟ್ಟನೊಡಗಿ, ದೇವಿಂದ್ರ ಉಳ್ಳಾಗಡ್ಡಿ, ಬಾಬುರಾವ ದೇವರಮನಿ ಸಭೆಯಲ್ಲಿ ಉಪಸ್ಥಿತರಿದ್ದರು.