ಪದವಿಧರ ಶಿಕ್ಷಕರ ಬೇಡಿಕೆಗೆ ಒತ್ತಾಯಿಸಿ ಶಾಸಕರಿಗೆ ಮನವಿ
ಸಿರವಾರ.ಅ೮-
ಕಳೆದ ೬,೭ವರ್ಷಗಳಿಂದ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಅಳವಡಿಸಿರುವ ಅವೈಜ್ಞಾನಿಕ ಅಂಶಗಳಿಂದ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇವಾ ನಿರತ ಪದವೀಧರ ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ಶಿಕ್ಷಣ ಸಚಿವರ ಗಮನಕ್ಕೆ ತರುಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕ ಘಟಕದಿಂದ ಮಾನ್ವಿ ಶಾಸಕರಾದ ಜಿ.ಹಂಪಯ್ಯನಾಯಕ ಅವರಿಗೆ ಮನವಿ ಪತ್ರ ನೀಡುವ ಮೂಲಕ ಒತ್ತಾಯಿಸಿದರು. ಈ ಕುರಿತು ಮಾತನಾಡಿದ ಸಂಘದ ಅದ್ಯಕ್ಷ ಮಲ್ಲೇಶಪ್ಪ ಹಲವಾರು ಬಾರಿ ತಾಲ್ಲೂಕು, ಜಿಲ್ಲೆ, ರಾಜ್ಯ ಹಂತದಲ್ಲಿ ಸಂಬಂಧಿಸಿದ ಎಲ್ಲರಿಗೂ ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದರೂ ಸ್ಪಂದಿಸದೇ ಇರುವುದರಿಂದ ಹಾಗೂ ಶಾಲಾ ಹಂತದಲ್ಲಿ ಮಕ್ಕಳ ಭವಿಷ್ಯಕ್ಕೆ ಅನ್ಯಾಯವಾಗಬಾರದೆಂಬ ಏಕೈಕ ಉದ್ದೇಶದಿಂದ ಶಿಕ್ಷಕರಿಗೆ ಎಷ್ಟೇ ಅನ್ಯಾಯವಾದರೂ ಶಿಕ್ಷಕರ ಸಮಸ್ಯೆಯನ್ನು ಸರ್ಕಾರ ಸರಿಪಡಿಸುತ್ತದೆ ಎಂಬ ನಂಬಿಕೆಯಿಂದ ಬೀದಿಗಿಳಿದಿರುವುದಿಲ್ಲ ಆದರೆ,
ಅಂತಿಮವಾಗಿ ಶಿಕ್ಷಕರ ನ್ಯಾಯಯುತವಾದ ಬಹುದಿನದ ಬೇಡಿಕೆಗೆ ಸರ್ಕಾರ ಸ್ಪಂದಿಸದೇ ಇರುವುದರಿಂದ ದಿನಾಂಕ: ೨೯-೦೭-೨೦೨೪ರಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು ಇದರ ಕಾರ್ಯಕಾರಿ ಸಮಿತಿ ಸಭೆಯು ಬೆಂಗಳೂರಿನಲ್ಲಿ ಜರುಗಿತು. ಸದರಿ ಸಭೆಯಲ್ಲಿ ರಾಜ್ಯದ ೩೫ ಶೈಕ್ಷಣಿಕ ಜಿಲ್ಲೆಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಭಾಗವಹಿಸಿದ್ದರು. ಸದರಿ ಸಭೆಯಲ್ಲಿ ರಾಜ್ಯದ ಶಿಕ್ಷಕರ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ವಿಶೇಷವಾಗಿ ಸೇವಾ ನಿರತ ಪದವೀಧರ ಶಿಕ್ಷಕರ ಸಮಸ್ಯೆಗಳ ಬಗ್ಗೆ ಎಲ್ಲಾ ಜಿಲ್ಲೆಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿದರು. ೨೦೧೭ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು ೨೦೧೬ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಇದರಿಂದ ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸುವ ಕುರಿತು. ಅರ್ಹ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ೨೦೧೬ರ ಪೂರ್ವದಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢ ಶಾಲೆಗೆ ಬಡ್ತಿ ನೀಡುಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ೨೦೧೬ರ ಪೂರ್ವದಂತೆ ಮುಖ್ಯಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು ಇನೂ ಅನೇಕ ಬೇಡಿಕೆಗಳನ್ನು ಈಡೆರಿಸುವಂತೆ ಮನವಿ ಪತ್ರದಲ್ಲಿ ತಿಳಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಜಾಹೀದ್ ಪಾಶಾ ಪ್ರಧಾನ ಕಾರ್ಯದರ್ಶಿ, ಶಾಂತಮೂರ್ತಿ ಉಪಾಧ್ಯಕ್ಷ, ರಾಘವೇಂದ್ರ ಸಹ ಕಾರ್ಯದರ್ಶಿ, ಬಸವರಾಜ ಕಲ್ಮಲಾ, ನಿರ್ಮಲ ಮೇಗಳಮನೆ ಉಪಾಧ್ಯಾಕ್ಷ, ಪವನಕುಮಾರ ಜಿಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರು, ಜಿಲ್ಲಾ ನಾಮ ನಿರ್ದೇಶನ ಪದಾಧಿಕಾರಿಗಳು, ತಾಲ್ಲೂಕು ನಾಮ ನಿರ್ದೇಶನ ಪದಾಧಿಕಾರಿಗಳು ಹಾಗೂ ಸರ್ವ ನಿರ್ದೇಶಕರು ಇದರು