ಮುಖ್ಯೋಪಾಧ್ಯಾಯ ನೇಣಿಗೆ ಶರಣು
ವಿಜಯಪುರ,ಆ.8 :ಶಾಲೆಯ ಸ್ಟಾಕ್ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮುಖ್ಯೋಪಾಧ್ಯಾಯನ ಶವ ಪತ್ತೆಯಾದ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಮುಖ್ಯೋಪಾಧ್ಯಾಯ ಸಿ.ಎಸ್. ಹಡಪದ (54) ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಹಡಪದ ಅವರು ಕಳೆದ ಎರಡು ವರ್ಷದಿಂದ ನಾಗೂರು ಶಾಲೆಯಲ್ಲಿ ಸೇವೆ ಸಲ್ಲಿತ್ತಿದ್ದರು.
ಶಾಲಾ ಅವಧಿ ಮುಗಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಸಾವಿನ ಕುರಿತು ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ.
ಶಿಕ್ಷಕರು, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರ ಕಿರುಕುಳದಿಂದ ಮನನೊಂದು ನೇಣಿಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಸರ್ಕಾರಿ ನೌಕರರ ಸಂಘದಿಂದಲೂ ಸಾವಿನ ಕುರಿತು ಸಂಶಯ ವ್ಯಕ್ತವಾಗಿದೆ.
ಈ ಬಗ್ಗೆ ಸೂಕ್ತ ತನಿಖೆಗೆ ನಡೆಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಬಸವನಬಾಗೇವಾಡಿ ಪೆÇಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪೆÇಲೀಸರ ತನಿಖೆ ಬಳಿಕ ಸತ್ಯಾಂಶ ಹೊರ ಬರಲಿದೆ.
ಶಿಕ್ಷಕನ ದಾರುಣ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.