ವಸತಿ ನಿಲಯ ನಿರ್ವಹಣೆ ಸುತ್ತೊಲೆಗೆ ವೆಂಕಟೇಶ ಸೂಚನೆ
(ಸಂಜೆವಾಣಿ ವಾರ್ತೆ)
ರಾಯಚೂರು,ಆ.೮:
ಜಿಲ್ಲೆಯಾದ್ಯಂತ ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಅಗತ್ಯ ಮೂಲಭೂತ ಸೌಕರ್ಯ ಸುಷಿತ್ವ ಉತ್ತಮ ಆಹಾರ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸೂಕ್ತವಾಗಿ ನಿರ್ವಹಿಸಲು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಸುತ್ತೋಲೆ ಹೊರಡಿಸುವಂತೆ ಸೂಚನೆ ನೀಡಲಾಗಿದೆ ಮಕ್ಕಳ ಆಯೋಗದ ಸದಸ್ಯ ಹಾಗೂ ಜಿಲ್ಲಾ ಉಸ್ತುವಾರಿ ವೆಂಕಟೇಶ ಅವರು ಹೇಳಿದರು.
ಅವರಿಂದು ನಗರದ ಉಪ ನಿರ್ದೇಶಕರ ಕಚೇರಿಯಲ್ಲಿ ಬಾಲ್ಯ ವಿವಾಹ ವಿಷಯದ ಕಾಯ್ದೆ ಮತ್ತು ಬಾಲ ನ್ಯಾಯ ಕಾಯ್ದೆ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ವಸತಿ ನಿಲಯಗಳಿಗೆ ಸುತ್ತೋಲೆ ಹೊರಡಿಸಬೇಕೆಂದು ಸಮಾಜ ಕಲ್ಯಾಣ ಉಪ ನಿರ್ದೇಶಕರಿಗೆ ಸೂಚನೆ ನೀಡಿದ ಅವರು, ಒಂದು ವರ್ಷದಿಂದ ಜಿಲ್ಲೆಯಲ್ಲಿ ಅಪೌಷ್ಟಿಕತೆ, ಶಾಲೆಯಿಂದ ಹೊರಗಿಳಿದ ಮಕ್ಕಳು, ಬಾಲಕಾರ್ಮಿಕ ಮಕ್ಕಳು, ವಸತಿಗೃಹಗಳು, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಸತಿ ನಿಲಯ ಹಾಗೂ ಅಲ್ಪಸಂಖ್ಯಾತರ ವಸತಿ ಸೇರಿದಂತೆ ಎಲ್ಲಾ ವಸತಿ ನಿಲಯಗಳಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಕ್ಕಳಿಗೆ ಸಿಗಬೇಕಾದ ಸೌಲಭ್ಯಗಳು ಸಿಗಬೇಕಾದರೆ ಪ್ರತಿಯೊಬ್ಬರು ಪ್ರಾಮಾಣಿಕ ಬದ್ಧತೆಯಿಂದ ಕೆಲಸ ಮಾಡಿದಾಗ ಮಾತ್ರ ಮಕ್ಕಳಿಗೆ ಸೌಲಭ್ಯ ಕಲ್ಪಿಸಲು ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಅಧಿಕಾರಿಗಳು ಮಕ್ಕಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂಥ ಕಲಸ ಮಾಡಬೇಕಿದೆ. ಪ್ರತಿ ಇಲಾಖೆಯಲ್ಲೂ ಸಭೆಗಳನ್ನು ನಡೆಸುತ್ತಿದ್ದೇವೆ. ವಸತಿ ನಿಲಯಗಳಲ್ಲಿ ಮಕ್ಕಳಿಗೆ ಮೂಲಭೂತ ಸೌಲಭ್ಯ ಕೊರತೆ, ಗುಣಾತ್ಮಕವಾಗಿ ಆಹಾರ ಹಾಗೂ ಮಕ್ಕಳಿಗೆ ಸಾಂಸ್ಕೃತಿ ಸಂಸ್ಕಾರ ಕಳಿಸುವಲ್ಲಿ ಹಲ್ಲಿನ ವಾರ್ಡನ್ ಗಳು ಮಾಡಬೇಕೆಂದು ಸಂಘ ಸಂಸ್ಥೆಗಳಿಂದ ದೂರುಗಳು ಬಂದಿವೆ. ಈ ನಿಟ್ಟಿನಲ್ಲಿ ಸರ್ಕಾರದ ಸುತ್ತೋಲೆ ಹಾಗೂ ನಿಯಮಗಳು ಅನುಸಾರ ಮೂಲಭೂತ ಸೌಲಭ್ಯಗಳನ್ನು ಮಕ್ಕಳಿಗೆ ಕಲ್ಪಿಸಬೇಕೆಂದು ಸೂಚನೆ ನೀಡಿದರು.