ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಹೇಮಲತಾ ಬೂದೆಪ್ಪ ಪ್ರಬಲ ಅಕಾಂಕ್ಷಿ
(ಸಂಜೆವಾಣಿ ವಾರ್ತೆ)
ರಾಯಚೂರು,ಆ.೮: ರಾಯಚೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ವಾರ್ಡ್ ೧೯ರ ಮಾಜಿ ನಗರಸಭೆ ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಸದಸ್ಯರಾದ ಪಿ.ಹೇಮಲತಾ ಬೂದೆಪ್ಪ ಅವರು ಸಹ ಪ್ರಬಲ ಅಕಾಂಕ್ಷಿಯಾಗಿದ್ದಾರೆ.
ನಗರಸಭೆ ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ (ಮಹಿಳೆ) ಗೆ ಮೀಸಲಾತಿ ಕಲ್ಪಿಸಿರುವುದರಿಂದ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಹೇಮಲತಾ ಪಿ.ಬೂದೆಪ್ಪ ಅವರು ಸಹ ಪ್ರಬಲ ಅಕಾಂಕ್ಷಿಯಾಗಿದ್ದಾರೆ. ಈ ಹಿಂದೆ ನಗರಸಭೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು ಅಲ್ಲದೇ ಪ್ರಸ್ತುತ್ತ ಪಕ್ಷೇತರ ಸದಸ್ಯರಾಗಿರುವ ಹೇಮಲತಾ ಬೂದೆಪ್ಪ ಅವರು ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವುದರಿಂದ ನಾನು ಸಹ ಅಧ್ಯಕ್ಷ ಸ್ಥಾನದ ಅಕಾಂಕ್ಷಿ ಎಂದು ತಮ್ಮ ನಾಯಕರಲ್ಲಿ ಮತ್ತು ಬೆಂಬಲಿಗರಲ್ಲಿ ಹೇಳಿಕೊಂಡಿದ್ದಾರೆ.
ನಗರಸಭೆ ಅಧ್ಯಕ್ಷ ಸ್ಥಾನವು ಎಸ್.ಸಿ ಮಹಿಳೆಗೆ ಮೀಸಲಾತಿ ನಿಗದಿಯಾಗಿರುವುದರಿಂದ ಕಾಂಗ್ರೆಸ್ ಪಕ್ಷದಲ್ಲಿ ಸಹ ಅಕಾಂಕ್ಷಿಗಳಲ್ಲಿ ಇವರು ಒಬ್ಬರು ಸಹ ಪ್ರಬಲ ಅಕಾಂಕ್ಷಿಯಾಗಿದ್ದಾರೆಂದು ತಿಳಿದುಬಂದಿದೆ. ಆದರೆ ಚುನಾವಣೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಆದರೂ ಅಕಾಂಕ್ಷಿಗಳ ನಾನು ಅಧ್ಯಕ್ಷ ಸ್ಥಾನಕ್ಕೆ ಅಕಾಂಕ್ಷಿ ಎನ್ನಲಾಗುತ್ತಿದೆ. ಪಿ.ಬೂದೆಪ್ಪ ಮತ್ತು ಪಿ.ತೇಜಪ್ಪ ಅವರು ಸಹ ಕಾಂಗ್ರೆಸ್ ಪಕ್ಷದವರಾಗಿದ್ದಾರೆ.
ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ದರಾಗಿರುತ್ತೇನೆ. ಮತ್ತು ನಾನು ಸಹ ಅಕಾಂಕ್ಷಿ ಎಂದು ಹೈಕಮಾಂಡ್ ನಾಯಕರಿಗೆ ಸಹ ನಾನು ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಮಲತಾ ಬೂದೆಪ್ಪ ಅವರು ತಿಳಿಸಿದ್ದಾರೆ.