ವಿನೀಸ್ ಅನರ್ಹತೆಗೊಳಿಸಿದ್ದು ದೇಶಕ್ಕೆ ಮಾಡಿದ ಅವಮಾನ
ರಾಯಚೂರು.ಆ೮-
ಪ್ಯಾರಿಸ್ ಒಲಿಂಪಿಕ್ಸ್ ಸ್ಪರ್ಧೆಯಿಂದ ಕುಸ್ತಿಪಟು ವಿನೇಶಾ ಫೋಗಟ್ ಅವರನ್ನು ಅನರ್ಹಗೊಳಿಸಿರುವುದು ’ಇಡೀ ದೇಶಕ್ಕೆ ಮಾಡಿದ ಅವಮಾನ’ ಎಂದು ಮಾಜಿ ರಾಷ್ಟ್ರೀಯ ಹಾಕಿ ಆಟಗಾರ ಡಾ. ಬಾಬುರಾವ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಗುರುವಾರ ಹೇಳಿಕೆಯೊಂದನ್ನು ನೀಡಿ, ಮಹಿಳೆಯರ ಕುಸ್ತಿ ಸ್ಪರ್ಧೆಯ ೫೦ ಕೆ.ಜಿ ವಿಭಾಗದಲ್ಲಿ ಫೈನಲ್ ತಲುಪಿದ್ದ ವಿನೇಶಾ, ಅಧಿಕ ತೂಕ ಹೊಂದಿದ್ದಾರೆ ಎಂದು ’ಬಂಗಾರದ ಪದಕ’ ಸುತ್ತಿನಿಂದ ಹೊರಹಾಕಲಾಗಿದೆ. ಈ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದು, ಇದು ವಿನೇಶಾ ಫೋಗಟ್ಗಷ್ಟೇ ಅಲ್ಲ. ಇಡೀ ದೇಶಕ್ಕೆ ಆಗಿರುವ ಅವಮಾನ. ಇತಿಹಾಸ ನಿರ್ಮಿಸಲು ಹೊರಟಿದ್ದ ಫೋಗಟ್ ಅವರು, ೧೦೦ ಗ್ರಾಂ ಅಧಿಕ ತೂಕ ಹೊಂದಿದ್ದಾರೆ ಎಂದು ಘೋಷಿಸಿರುವುದು ಮತ್ತು ಅನರ್ಹಗೊಳಿಸಿರುವುದು ಘೋರ ಅನ್ಯಾಯ. ಇಡೀ ದೇಶ ವಿನೇಶಾ ಅವರೊಂದಿಗೆ ಇದೆ. ಭಾರತ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದಾದರೆ ಒಲಿಂಪಿಕ್ಸ್ ಅನ್ನೇ ಬಹಿಷ್ಕರಿಸಬೇಕು’ ಎಂದು ಆಗ್ರಹಿಸಿದ್ದಾರೆ.