ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ : ಜಿಲ್ಲಾಧಿಕಾರಿ ಡಾ.ಸುಶೀಲ.ಬಿ
ಯಾದಗಿರಿ : ಆ.8 : ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇಲ್ಲಿ ಸೇವಾ ಭಾವನೆಯಿಂದ ಕೆಲಸ ಮಾಡುವುದರಿಂದ ಇದರ ಪ್ರತಿಫಲವು ನೇರವಾಗಿ ರೈತರಿಗೆ ತಲುಪುತ್ತದೆ. ಇವುಗಳನ್ನು ಉಳಿಸಿ ಗ್ರಾಮೀಣಾಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ ಅವರು ಸಲಹೆ ನೀಡಿದರು.
ಸಹಕಾರ ಸಂಘಗಳು ಗ್ರಾಮೀಣ ಜನರ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುವುದರಿಂದ ಇವುಗಳನ್ನು ಉಳಿಸಿ ಗ್ರಾಮೀಣಾಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಬೇಕು ಎಂದರು.