ಚಿಂಚೋಳಿಯಲ್ಲಿ ಗೆದ್ದ ಪಕ್ಷ ಮತ್ತೆ ರಾಜ್ಯದಲ್ಲಿ ಅಧಿಕಾರ: ಸಿಂಗೆ
ಕಲಬುರಗಿ:ಆ.8: ರಾಜ್ಯದಲ್ಲಿ ಮುಡಾ ಹಗರಣ ಹಾಗೂ ವಾಲ್ಮೀಕಿ ಅಬಿವೃದ್ದಿ ನಿಗಮದಲ್ಲಿ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಚಿಂಚೋಳಿ ಬಿಜೆಪಿ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರವಿ ಸಿಂಗೆ ಅರಣಕಲ್ ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಈಗಾಗಲೇ ಚಿಂಚೋಳಿ ಕ್ಷೇತ್ರದಿಂದ ಚುನಾವಣೆಯಲ್ಲಿ ಗೆದ್ದ ಪಕ್ಷ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಕೈ ಹಿಡಿಯಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಏಕೆಂದರೆ ಚಿಂಚೋಳಿ ಕ್ಷೇತ್ರದಿಂದ ಯಾವುದೇ ಪಕ್ಷದ ಅಭ್ಯರ್ಥಿ ಸ್ಪರ್ದಿಸಿ ಗೆದ್ದರೆ ಅದೇ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಇತಿಹಾಸ ಇದೆ ಎಂಬುವುದು ಜನರ ಅಭಿಪ್ರಾಯವಾಗಿತ್ತು.ಈ ಅಭಿಪ್ರಾಯ ಈಗ ರಾಜ್ಯದಲ್ಲಿ ಮತ್ತೆ ಬಿಜೆಪಿ ಪಕ್ಷ ಕೆಲವೇ ದಿನಗಳಲ್ಲಿ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.