ಮೈಸೂರು ಚಲೋ’ ಮೈತ್ರಿ ಪಾದಯಾತ್ರೆ: ಬೀದರ್ ಶಾಸಕರು, ನಾಯಕರು ಹುಮ್ಮಸ್ಸಿನಿಂದ ಪಾದಯಾತ್ರೆಯಲ್ಲಿ ಭಾಗಿ
ಬೀದರ:ಆ.8:ಬಿಜೆಪಿ ಮತ್ತು ಜೆಡಿಎಸ್ ಮುಡಾ ಹಗರಣದ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ನಡೆಸುತ್ತಿರುವ ‘ಮೈಸೂರು ಚಲೋ’ ಪಾದಯಾತ್ರೆ 5ನೇ ದಿನಕ್ಕೆ ಕಾಲಿಟ್ಟಿದೆ. ಸದ್ಯ ಮಂಡ್ಯ ಜಿಲ್ಲೆಯಲ್ಲಿ ಪಾದಯಾತ್ರೆ ನಡೆಯುತ್ತಿದೆ.
“ಮೈಸೂರು ಚಲೋ” ದಿನ5
ದುರಾಡಳಿತದ ಹಗರಣಗಳ ಸರ್ಕಾರದ ವಿರುದ್ಧದ ಸತತ 5 ನೇ ದಿನದ ಪಾದಯಾತ್ರೆ ಯಲ್ಲಿ ಬೀದರ್ ಜಿಲ್ಲೆಯ ಎಲ್ಲ ನಾಯಕರು ಒಗ್ಗಟ್ಟಿನಿಂದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.
5ನೇ ದಿನದ ಮೈಸೂರು ಚಲೋ ಪಾದಯಾತ್ರೆ ಮಂಡ್ಯದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದರು. ಇದೇ ವೇಳೆ ಬೃಹತ್ ಪಾದಯಾತ್ರೆಯ ಕಾರ್ಯಕ್ರಮನ್ನುದ್ದೇಶಿಸಿ ಮಾತನಾಡಿದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ದಲಿತರು, ಪರಿಶಿಷ್ಟ ಜಾತಿ, ಪಂಗಡದ ಜನರು, ಬಡವರು, ನಿರ್ಗತಿಕರ ಪರವಾಗಿ ಧ್ವನಿ ಎತ್ತಿರುವ ವಿರೋಧ ಪಕ್ಷದ ಪ್ರಶ್ನೆಗಳಿಗೆ ಸದನದಲ್ಲೂ ಉತ್ತರ ಕೊಡದೆ, ಹೊರಗೂ ಉತ್ತರ ನೀಡದೆ ವಿರೋಧ ಪಕ್ಷಗಳನ್ನೇ ಪ್ರಶ್ನಿಸುವ ಮೂಲಕ ಹಗರಣಗಳನ್ನು ಮುಚ್ಚುವ ಪ್ರಯತ್ನ ಮಾಡುತ್ತಿದ್ದಾರೆ. ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದಲ್ಲಿನ ಹಗರಣ ಖಂಡಿಸಿ ಬಿಜೆಪಿ ಜೆಡಿಎಸ್ ದೋಸ್ತಿಯಾಗಿ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆ ಇಂದು 5ನೇ ದಿನಕ್ಕೆ ಕಾಲಿಟ್ಟಿದೆ.
ಪಾದಯಾತ್ರೆಯಲ್ಲಿ ಕಾರ್ಯಕರ್ತರು ಉತ್ಸಾಹದಿಂದಲೇ ಭಾಗಿಯಾದರು.
ಐದನೇ ದಿನದ ಪಾದಯಾತ್ರೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಉತ್ಸಾಹದಿಂದ ಹೆಜ್ಜೆ ಹಾಕುತಿದ್ದಾರೆ. ಬೀದರ್ ಜಿಲ್ಲೆಯ ಶಾಸಕರು, ನಾಯಕರು ಹುಮ್ಮಸ್ಸಿನಿಂದ ಪಾದಯಾತ್ರೆಯಲ್ಲಿ ಪಾಲ್ಗೊಂಡು ಉತ್ಸಾಹದ ಹೆಜ್ಜೆ ಹಾಕಿದರು.
ಈ ಸಂದರ್ಭದಲ್ಲಿ ಶಾಸಕರು ಬಿಜೆಪಿ ರಾಜ್ಯ ಕಾರ್ಯದರ್ಶಿ ಡಾ. ಶೈಲೇಂದ್ರ ಬೆಲ್ದಾಳೆ, ಶಾಸಕರಾದ ಪ್ರಭು ಚವ್ಹಾಣ, ಶರಣು ಸಲಗರ, ಸಿದ್ದು ಪಾಟೀಲ. ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸೋಮನಾಥ ಪಾಟೀಲ್, ಮುಖಂಡರಾದ ಈಶ್ವರ ಸಿಂಗ್ ಠಾಕೂರ್, ಮಹೇಶ ಪಲಮ, ಅಶೋಕ ಹೊಕ್ರಾಣೆ, ಜಗನ್ನಾಥ ಪಾಟೀಲ, ಸಂತೋಷ ರೆಡ್ಡಿ ಸೂರ್ಯಕಾಂತ ಚಿಲ್ಲಾಬಟ್ಟೆ
ಮತ್ತಿತರರು ಉಪಸ್ಥಿತರಿದ್ದರು.