ಬಸವ ಶಾಲೆ ವಿದ್ಯಾರ್ಥಿಗಳ ಸಾಧನೆ
ಬೀದರ್: ಆ.8:ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮನ್ನಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಮನ್ನಳ್ಳಿಯ ಬಸವ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಬಾಲಕ ಮತ್ತು ಬಾಲಕಿಯರ ವಿಭಾಗಗಳ ವಾಲಿಬಾಲ್ ಹಾಗೂ ಕೊಕ್ಕೊ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿ ಗಮನ ಸೆಳೆದಿದ್ದಾರೆ.
ಕೊಕ್ಕೊದಲ್ಲಿ ಶಾಲೆಯ ಬಾಲಕರ ತಂಡವು ರಾಜಗೀರಾ ತಂಡವನ್ನು ಹಾಗೂ ಬಾಲಕಿಯರ ತಂಡವು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆಯಿತು.
ವಾಲಿಬಾಲನಲ್ಲಿ ಶಾಲೆಯ ಬಾಲಕರ ತಂಡವು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ತಂಡವನ್ನು ಮತ್ತು ಬಾಲಕಿಯರ ತಂಡವು ರಾಜಗೀರಾ ತಂಡವನ್ನು ಪರಾಭವಗೊಳಿಸಿತು.
ಶಾಲೆಯ ಬಾಲಕ ಹಾಗೂ ಬಾಲಕಿಯರು ಕೊಕ್ಕೊ ಮತ್ತು ವಾಲಿಬಾಲ್ ಸ್ಪರ್ಧೆಯಲ್ಲಿ ತಾಲ್ಲೂಕುಮಟ್ಟಕ್ಕೆ ಅರ್ಹತೆ ಗಳಿಸಿದರು.
ಕ್ರೀಡಾಕೂಟದಲ್ಲಿನ ವಿದ್ಯಾರ್ಥಿಗಳ ಸಾಧನೆಗೆ ಬಸವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅನಿಲಕುಮಾರ ಪನ್ನಾಳೆ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಬಸವರಾಜ ನವಣೆ, ಪ್ರೌಢಶಾಲೆ ಮುಖ್ಯಶಿಕ್ಷಕ ಶಶಿಧರ ನಿಜಾಂಪುರೆ ಹಾಗೂ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.