ಮೈಸೂರು ಚಲೋ: ಮರತೂರಕರ್ ಭಾಗಿ
ಕಲಬುರಗಿ:ಆ.8: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಹಮ್ಮಿಕೊಂಡಿರುವ ‘ಮೈಸೂರು ಚಲೊ’ ಪಾದಯಾತ್ರೆಯು ಮಂಗಳವಾರ ನಾಲ್ಕನೇ ದಿನ ಪೂರೈಸಿತು.ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ಸತತ ಐದನೇ ದಿನವೂ ಪಾದಯಾತ್ರೆಯಲ್ಲಿ ಪಾಲ್ಗೊಂಡರು.
ಪಾದಯಾತ್ರೆಯು ಮಂಗಳವಾರ ಮದ್ದೂರು ತಾಲ್ಲೂಕಿನ ನಿಡಘಟ್ಟದಿಂದ ಪ್ರಾರಂಭವಾಯಿತು.
ಯಾತ್ರೆಯಲ್ಲಿ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಶಿವಪ್ರಭು ಪಾಟೀಲ ಹಾಗೂ ಬಿಜೆಪಿ-ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.