ಪರಿಸರ ಮಾಹಿತಿ ಕಾರ್ಯಕ್ರಮ
ನವಲಗುಂದ,ಆ.8: ಇಂದಿನ ದಿನಗಳಲ್ಲಿ ಜೂನ್ 5ರಂದು ಮಾತ್ರ ಗಿಡ ನೆಡುವ ಮೂಲಕ “ಪರಿಸರ ಪ್ರೇಮಿ’ ಎನಿಸಿ ಅನಂತರ ಅದರ ಬಗ್ಗೆ ಯಾವುದೇ ರೀತಿಯ ಕಾಳಜಿ ವಹಿಸದೇ ಪರಿಸರದ ಕುರಿತಾದ ಭಾಷಣಗಳಿಗೆ ಸೀಮಿತವಾಗಿ ಬಿಟ್ಟಿದೆ. ಮತ್ತೆ ಪರಿಸರವು ನೆನಪಾಗಬೇಕೆಂದರೆ ಮುಂದಿನ ವರ್ಷದ ಜೂನ್ 5 ಬರಬೇಕು. ಇದು ಇಂದಿನ ಸ್ಥಿತಿಯಾಗಿದೆ ಎಂದು ಧರ್ಮಸ್ಥಳ ಸಂಸ್ಥೆಯ ಯೋಜನಾಧಿಕಾರಿ ದಿನೇಶ್ ಶೇರಿಗಾರ ಕಳವಳ ವ್ಯಕ್ತಪಡಿಸಿದರು.
ಅವರು ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ 8 ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿದ್ಯಾರ್ಥಿಗಳಿಗೆ ಪರಿಸರ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಲೆಗಳಲ್ಲಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶಾಲೆ ಮುಖ್ಯಶಿಕ್ಷಕ ಎನ್ ಎಸ್ ಉಪ್ಪಿನ ಅವರು ಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಕುರಿತು ಪ್ರಬಂಧ, ಬಹುಮಾನ ವಿತರಿಸಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ಸುಧೀರ್ಘ ಮಾಹಿತಿ ನೀಡಿದರು.
ಸಂಸ್ಥೆಯ ಕೃಷಿ ಮೇಲ್ವಿಚಾರಕ ಶಂಕರ ಆರಗೋಳ ಮಾತನಾಡಿ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಪರಿಸರ ಸಂರಕ್ಷಣೆ ಕುರಿತು ಚಿಂತನೆ,ಜಾಗೃತಿ, ಅರಿವು ಮೂಡಿಸುವ ಸಲುವಾಗಿ ತಾಲೂಕಿನ 10 ಶಾಲಾ ಕಾಲೇಜುಗಳಲ್ಲಿ ಪರಿಸರದ ಕುರಿತು ಮಾಹಿತಿ ಕಾರ್ಯಕ್ರಮ ಮತ್ತು ಪರಿಸರದ ಕುರಿತು ಸ್ಪರ್ಧೆಗಳನ್ನು ಆಯೋಜನೆ ಮಾಡಿ ವಿದ್ಯಾರ್ಥಿಗಳನ್ನ ಪರಿಸರ ಸಂರಕ್ಷಣೆ ಮತ್ತು ಹೆಚ್ಚಿನ ಆಸಕ್ತಿ ಮೂಡುವಂತಾಗಲಿ ಎಂದು ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ ಎಂದರು,
ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಪ್ರಧಾನಪ್ಪ ಗುಂಡಪ್ಪ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಹಾಮಂಡಳ ರಾಜ್ಯಾಧ್ಯಕ್ಷ ಅಬ್ದುಲರಝಾಕ ನದಾಫ, ಒಕ್ಕೂಟ ಅಧ್ಯಕ್ಷೆ ಸುಜಾತ ಜಾದವ, ಶಿಕ್ಷಕಿಯರಾದ ವಿ ಜಿ ಕುರಹಟ್ಟಿ, ಬಿ ಜಿ ಹೆಬ್ಬಳ್ಳಿ, ವಲಯ ಮೇಲ್ವಿಚಾರಕಿ ವಾಣಿಶ್ರೀ ಸೇರಿದಂತೆ ಸಂಘದ ಪದಾಧಿಕಾರಿಗಳು ಶಾಲಾ ಸಹಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಫಾತಿಮಾ ದೊಡ್ಡಮನಿ ಕಾರ್ಯಕ್ರಮ ನಿರ್ವಹಿಸಿದರು.