ಪಾದಯಾತ್ರೆಗೆ ಸಾಥ್
ಚನ್ನಮ್ಮನ ಕಿತ್ತೂರು,ಆ.8: ಮೈಸೂರು ಅಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆಯಲ್ಲಿ ಭಾರೀ ಅವ್ಯವಹಾರ ನಡೆದ ಹಿನ್ನೆಲೆ ಸಿಎಂ ಸಿದ್ದರಾಮಯ್ಯಾ ರಾಜೀನಾಮೆ ನೀಡಬೇಕೆಂದು ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ನಡೆಸಿರುವ ಮೈಸೂರು ಚಲೋ ಪಾದಯಾತ್ರೆಗೆ ಕಿತ್ತೂರಿನ ಬಿಜೆಪಿ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸಾಥ್ ನೀಡಿದರು.
ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆಗೆ ಆಗ್ರಹಿಸಿ ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಹೋರಾಟಕ್ಕೆ ಮಾಜಿ ಶಾಸಕ ದೊಡ್ಡಗೌಡರ ನೇತೃತ್ವದ ತಂಡ ಸಾಥ್ ನೀಡಿತು.
ಹಾಲಿ ಶಾಸಕರು, ಮಾಜಿ ಸಚಿವ-ಶಾಸಕರುಗಳು, ಜೆಡಿಎಸ್-ಬಿಜೆಪಿ ಮುಖಂಡರು, ಕಾರ್ಯಕರ್ತರು ಪಾದಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.