ದೇಶದ ಸ್ವಾತಂತ್ರö್ಯದಲ್ಲಿ ಕ್ವಿಟ್ ಇಂಡಿಯಾ ಚಳುವಳಿಯ ಪಾತ್ರ ಪ್ರಮುಖ
ಕಲಬುರಗಿ:ಆ.೮: ದೇಶಕ್ಕೆ ಸ್ವಾತಂತ್ರö್ಯ ದೊರಕಿಸಿಕೊಡಲು ಅಸಂಖ್ಯಾತ ಭಾರತಿಯರು ನಿರಂತರವಾಗಿ ಹೋರಾಟ ಮಾಡಬೇಕಾಯಿತು. ಸ್ವಾತಂತ್ರö್ಯಕ್ಕಾಗಿ ಜರುಗಿದ ಸಾಕಷ್ಟು ಹೋರಾಟಗಳಲ್ಲಿ ‘ಕ್ವಿಟ್ ಇಂಡಿಯಾ ಚಳುವಳಿ’ ಅತ್ಯಂತ ಪ್ರಮುಖವಾಗಿದೆ. ‘ಮಾಡು ಇಲ್ಲವೇ ಮಡಿ’, ‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಎಂಬ ಘೋಷಣೆಯೊಂದಿಗೆ ಜರುಗಿದ ಈ ಚಳುವಳಿ ಜನಸಾಮಾನ್ಯರ ಚಳುವಳಿಯಾಗಿದ್ದರಿಂದ ಮುಂದೆ ದೇಶಕ್ಕೆ ಸ್ವಾತಂತ್ರö್ಯ ದೊರಕಿಸಿ ಕೊಡುವಲ್ಲಿ ತನ್ನದೇ ಆದ ಪ್ರಮುಖ ಪಾತ್ರ ವಹಿಸಿತು ಎಂದು ಉಪನ್ಯಾಸಕ, ಸಮಾಜ ಸೇವಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಆಳಂದ ರಸ್ತೆಯ ಶಿವ ನಗರದ ‘ಮಲ್ಲಿನಾಥ ಮಹಾರಾಜ ಶಾಲೆ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ‘ಕ್ವಿಟ್ ಇಂಡಿಯಾ ಚಳುವಳಿ ದಿನಾಚರಣೆ’ಯಲ್ಲಿ ರಾಷ್ಟçಪಿತ ಮಹಾತ್ಮ ಗಾಂಧಿಜಿ ಭಾವಚಿತ್ರಕ್ಕೆ ಪುಷ್ಪನಮನಗಳನ್ನು ಸಲ್ಲಿಸಿ ಅವರು ಮಾತನಾಡುತ್ತಿದ್ದರು.
ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ದೇಶದ ಜನರೇ ಹೆಚ್ಚಾಗಿ ಸ್ವ-ಇಚ್ಛೆಯಿಂದ ಭಾಗವಹಿಸಿದ್ದರಿಂದ ಎಲ್ಲೆಡೆ ವ್ಯಾಪಕವಾಗಿ ಹರಡಿ ಸ್ವಾತಂತ್ರö್ಯ ಪಡೆಯುವಲ್ಲಿ ಸಹಕಾರಿಯಾಯಿತು. ಅಸಂಖ್ಯಾತ ಸ್ವಾತಂತ್ರö್ಯ ಹೋರಾಟಗಾರರು ತಮ್ಮ ಆಸ್ತಿ-ಪಾಸ್ತಿ, ಜೀವವನ್ನು ನೀಡಿ ಸ್ವಾಂತ್ರö್ಯ ನೀಡಿದ್ದಾರೆ. ವಿಶ್ವಕ್ಕೆ ಗುರುವಾಗಬಲ್ಲ ಶಕ್ತಿ ಭಾರತಕ್ಕಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬ ಭಾರತೀಯ ಕಾರ್ಯ ನಿರ್ವಹಿಸಬೇಕಾಗಿದೆ ಎಂದರು.
ಶಾಲೆಯ ಮುಖ್ಯ ಶಿಕ್ಷಕಿ ಚಂಪಾಕಲಾ ನೆಲ್ಲೂರೆ ಮಾತನಾಡಿ, ವಿದ್ಯಾರ್ಥಿ ದೆಸೆಯಿಂದಲೇ ದೇಶಪ್ರೇಮ, ರಾಷ್ಟçಭಕ್ತಿ, ಐಕ್ಯತೆ, ಭ್ರಾತೃತ್ವ ಭಾವನೆಯಂತಹ ಗುಣಗಳನ್ನು ಮೈಗೂಡಿಸಿಕೊಂಡು ದೇಶ ಸೇವೆಯನ್ನು ಮಾಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಶಾಲೆಯ ಶಿಕ್ಷಕಿಯರಾದ ರೇಖಾ ಬಿ.ಪಾಟೀಲ, ಮಂಜುಳಾ ಬಿ.ನರೋಣಾ, ನಂದಿನಿ ಕಟ್ಟಿಕೇರೆ, ಸೇವಕಿ ಸುರೇಖಾ ಸಣಮನಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.