ದೇವನೂರು ಮಠದ ಶ್ರೀಗಳಿಂದ ಆಶೀರ್ವಾದ ಪಡೆದ ಶಾಸಕ ದರ್ಶನ್ ಧ್ರುವನಾರಾಯಣ್
ಸಂಜೆವಾಣಿ ವಾರ್ತೆ
ನಂಜನಗೂಡು.ಆ.08:-ನಂಜನಗೂಡು ತಾಲ್ಲೂಕಿನ ದೇವನೂರು ದಾಸೋಹ ಮಠದ ಮಠಾಧಿಪತಿಗಳಾದ ಶ್ರೀ ಮಹಾಂತಸ್ವಾಮಿಗಳವರ 78 ನೇ ವರ್ಷದ ಜನ್ಮದಿನದ ಹಿನ್ನೆಲೆ ದೇವನೂರು ಮಠಕ್ಕೆ ಇಂದು ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಮಠಕ್ಕೆ ಭೇಟಿ ನೀಡಿ ಶ್ರೀಗಳಿಗೆ ಶುಭ ಕೋರಿ ಆಶಿರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ರವರು, ಶಿವಪ್ಪ ದೇವರು ರವರು ಸೇರಿದಂತೆ ಹಲವು ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.