ಆ. 10ರಂದು ಭರಚುಕ್ಕಿ ಜಲಪಾತೋತ್ಸವ: ಸಕಲ ಸಿದ್ದತೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಆ.08-ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಭರಚುಕ್ಕಿಯಲ್ಲಿ ಇದೇ ಆಗಸ್ಟ್ 10ರಂದು ಜಲಪಾತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ಸಕಲ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಭರಚುಕ್ಕಿ ಜಲಪಾತೋತ್ಸವ ಆಯೋಜನೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರತು,.
ಜಿಲ್ಲೆಯು ವೈವಿಧ್ಯಮಯ ಹಲವು ಪ್ರವಾಸಿ ತಾಣಗಳನ್ನು ಹೊಂದಿದ್ದು, ಚಲುವ ಚಾಮರಾಜನಗರ ಹೆಸರಿನಡಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಜಲಪಾತೋತ್ಸವವನ್ನು ಆಗಸ್ಟ್ 10ರಂದು ಆಯೋಜನೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಆಗಸ್ಟ್ 10ರಂದು ಸಂಜೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ವಿವಿಧ ಇಲಾಖೆಗಳ ಸಚಿವರು, ಶಾಸಕರು, ಗಣ್ಯರು ಆಗಮಿಸಲಿದ್ದಾರೆ. ಈ ವೈಶಿಷ್ಟ್ಯ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಪೂರ್ಣ ಪ್ರಮಾಣದಲ್ಲಿ ತೊಡಗಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.
ಜಲಪಾತದ ಸೊಬಗನ್ನು ಬಣ್ಣದ ಬೆಳಕಿನಲ್ಲಿ ನೋಡುವ ಅವಕಾಶವನ್ನು ಮಾಡಲಾಗುತ್ತಿದೆ. ಜಲಪಾತೋತ್ಸವ ವೇದಿಕೆ ಕಾರ್ಯಕ್ರಮವು ನಡೆಯಲಿದ್ದು, ವಿವಿಧ ಬಗೆಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈ ಎಲ್ಲವು ಸುಸೂತ್ರವಾಗಿ ನೆರವೇರಲು ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ನಿಯೋಜನೆಗೊಂಡ ಅಧಿಕಾರಿಗಳು ಎಲ್ಲ ಸಿದ್ದತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಹೆಚ್ಚಿನ ಜನರು ಪ್ರವಾಸಿಗರು ಆಗಮಿಸಲಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ವ್ಯವಸ್ಥೆ ಕೈಗೊಳ್ಳಬೇಕು. ವಾಹನಗಳ ನಿಲುಗಡೆಗೆ ನಿಗದಿತ ಸ್ಥಳವನ್ನು ಗೊತ್ತು ಮಾಡಬೇಕು. ವಿವಿಧ ಭಾಗಗಳಿಂದ ಬರುವ ವಾಹನಗಳಿಗೆ ಸಂಚರಿಸಬೇಕಾದ ಮಾರ್ಗಗಳ ಬಗ್ಗೆ ಮಾಹಿತಿ ನೀಡಬೇಕು. ಜನ, ವಾಹನ ದಟ್ಟಣೆ ಆಗದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಜಲಪಾತೋತ್ಸವ ವೇದಿಕೆ ಬಳಿ ವಿವಿಧ ಮಳಿಗೆಗಳನ್ನು ತೆರೆಯಬೇಕು. ಆಹಾರ ತಿನಿಸು ಮಳಿಗೆಗಳಿಗೂ ಅವಕಾಶ ಮಾಡಿಕೊಡಲಾಗುತ್ತಿದೆ. ಬರುವ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಆಕರ್ಷಿಸುವ ರೀತಿಯಲ್ಲಿ ಎಲ್ಲಾ ವ್ಯವಸ್ಥೆಗಳು ಇರಬೇಕಿದೆ. ಹೀಗಾಗಿ ಎಲ್ಲ ಅವಶ್ಯಕ ಕ್ರಮಗಳನ್ನು ತುರ್ತಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.
ಕುಡಿಯುವ ನೀರು, ಶೌಚಾಲಯ, ಇತರೆ ಮೂಲ ಸೌಕರ್ಯಗಳು ಇರಬೇಕು. ಹೆಚ್ಚು ಜನರು ಆಗಮಿಸುವ ಹಿನ್ನೆಲೆಯಲ್ಲಿ ವೈದ್ಯಕೀಯ ತಂಡವು ನಿಯೋಜನೆಯಾಗಬೇಕು. ಸ್ವಚ್ಚತೆಯನ್ನೂ ಸಹ ಕಾಪಾಡಬೇಕು. ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸಬೇಕು. ಒಟ್ಟಾರೆ ಕಾರ್ಯಕ್ರಮವು ಅರ್ಥಪೂರ್ಣ ಹಾಗೂ ವಿಶಿಷ್ಟವಾಗಿ ನಡೆಯಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಮೋನಾ ರೋತ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಮಹೇಶ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪಿ. ಲಕ್ಷ್ಮೀ, ಡಿವೈಎಸ್ಪಿಗಳಾದ ಲಕ್ಷ್ಮಯ್ಯ, ಧಮೇಂದ್ರ, ತಹಶೀಲ್ದಾರರಾದ ಮಂಜುಳಾ, ಗಿರಿಜಾ, ಜಯಪ್ರಕಾಶ್, ರಮೇಶ್‍ಬಾಬು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಪೂರ್ಣಿಮ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಮಹೇಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜು, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕಿ ಮಂಜುಳಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೆಶಕ ಉದಯ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಯ ಬಳಿಕ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಭರಚುಕ್ಕಿಗೆ ತೆರಳಿ ಸಿದ್ದತೆಗಳನ್ನು ಪರಿಶೀಲಿಸಿದರು.