ನೇಮಕಾತಿ ನಿಯಮಗಳ ಬದಲಾವಣೆ ವಿರೋಧಿಸಿ ಶಿಕ್ಷಕರ ಬೃಹತ್ ಪ್ರತಿಭಟನೆ:ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಕೆ
ಸಂಜೆವಾಣಿ ವಾರ್ತೆ,
ವಿಜಯಪುರ,ಆ.೮:ನೇಮಕಾತಿ ನಿಯಮಗಳ ಬದಲಾವಣೆ ವಿರೋಧಿಸಿ ಶಿಕ್ಷಕರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾಧ್ಯಕ್ಷ ಜಿ.ಎಸ್. ಬೇವನೂರ ಇವರ ನೇತೃತ್ವದಲ್ಲಿ ಮನವಿಯನ್ನು ಸಲ್ಲಿಸಲಾಯಿತು.
ಓಅಖಿಇ ಹಾಗೂ ರಾಷ್ಟಿçÃಯ ಶಿಕ್ಷಣ ನೀತಿಯ ಶಿಫಾರಸ್ಸುಗಳಿಂದಾಗಿ ೨೦೧೬ಕ್ಕಿಂತ ಮೊದಲು ೧ ರಿಂದ ೭, ೧ ರಿಂದ ೮ ವೃಂದಕ್ಕೆ ನೇಮಕಾತಿಯಾದ ಎಲ್ಲಾ ಸಹ ಶಿಕ್ಷಕರು ಪ್ರಾಥಮಿಕ ಶಾಲಾ ಶಿಕ್ಷಕರು ೧ ರಿಂದ ೫ ಎಂದು ಪರಿಗಣಿಸಿದ್ದು, ಶಿಕ್ಷಕರಿಗೆ ತೀವ್ರ ಅನ್ಯಾಯವಾಗಿದೆ.
ಹೊಸ ವೃಂದಬಲ ನಿಗದಿಯಾಗುವವರೆಗೆ ಪ್ರಾಥಮಿಕ ಶಾಲಾ ಸಹ ಶಿಕ್ಷಕ ವೃಂದದಿAದ ಪ್ರೌಢಶಾಲಾ ಸಹ ಶಿಕ್ಷಕ ಗ್ರೇಡ್-೨ ವೃಂದಕ್ಕೆ ನಿಯಮಿತವಾಗಿ ಬಡ್ತಿ ನೀಡುವಲ್ಲಿ ಯಾವುದೇ ಸಮಸ್ಯೆಗಳು ಇರಲಿಲ್ಲ. ಪ್ರಾಥಮಿಕ ಶಾಲೆಗಳಲ್ಲಿ ೨೦೧೭ರ ಹೊಸ ವೃಂದಬಲ ನಿಗದಿಯಿಂದಾಗಿ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-೨ ವೃಂದಕ್ಕೆ ಬಡ್ತಿ ನೀಡುವಾಗ ಗೊಂದಲಗಳು ಉಂಟಾದುದ್ದನ್ನು ನಮ್ಮ ಸಂಘಟನೆಯು ಬಲವಾಗಿ ತಿಳಿಸುತ್ತಾ ಬಂದಿದ್ದರೂ, ಅದನ್ನು ಪರಿಹರಿಸದೇ, ಮುಂದೂಡುತ್ತಾ ಬರಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
೧ ರಿಂದ ೫ ಪ್ರಾಥಮಿಕ ಶಾಲಾ ಶಿಕ್ಷಕರೆಂದು ಪದನಾಮೀಕರಿಸಿರುವ ೨೦೧೬ಕ್ಕಿಂತ ಮೊದಲು ನೇಮಕವಾದ ೧ ರಿಂದ ೭, ೧ ರಿಂದ ೮ ವೃಂದದ ಪ್ರಾಥಮಿಕ ಶಾಲಾ ಸಹ ಶಿಕ್ಷಕರಲ್ಲಿ ಸುಮಾರು ೮೦೦೦೦ಕ್ಕೂ ಅಧಿಕ ಶಿಕ್ಷಕರು ಪದವಿಯೊಂದಿಗೆ ಬಿ.ಇಡಿ ವಿದ್ಯಾರ್ಹತೆ ಹೊಂದಿದ್ದರೂ ಇವರನ್ನು ೬ ರಿಂದ ೮ಕ್ಕೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರೆಂದು ಪರಿಗಣಿಸದೇ ಇರುವುದು ದುರಾದೃಷ್ಟಕರ. ಇದರ ನಡುವೆ ೨೦೧೬ರಿಂದ ಇತ್ತೀಚೆಗೆ ೬ರಿಂದ ೮ ವೃಂದದ ೨೦೧೧೦ ಶಿಕ್ಷಕರ ನೇಮಕಾತಿಯಾಗಿದ್ದು, ತತ್ಪರಿಣಾಮದಿಂದಾಗಿ ಅಷ್ಟೇ ಸಂಖ್ಯೆಯ ೧ ರಿಂದ ೫ ವೃಂದದ ಶಿಕ್ಷಕರ ಹೆಚ್ಚುವರಿ ಸಮಸ್ಯೆ ಸೃಷ್ಟಿಯಾಗಿತ್ತು. ಅದೇ ರೀತಿ ವರ್ಗಾವಣೆ ಪ್ರಕ್ರಿಯೆಯಲ್ಲೂ ಈ ವೃಂದ ಬಲದ ನಿಗದಿ ಸ್ಥಳಗಳ ಆಯ್ಕೆಯಲ್ಲಿ ತೀವ್ರವಾಗಿ ಶಿಕ್ಷಕರಿಗೆ ಸಮಸ್ಯೆ ಸೃಷ್ಟಿಸಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
೨೦೧೭ ರವರೆಗೆ ನೇಮಕವಾದ ಶಿಕ್ಷಕರನ್ನು ೧ ರಿಂದ ೭ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ, ಉಲ್ಲೇಖ (೧)ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, ೨೦೧೭ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಹಾಗೂ ಯಾವುದೇ ಕಾರಣಕ್ಕೂ ೨೦೧೬ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ “ಪದವೀಧರ ಶಿಕ್ಷಕರೆಂದು” ಪದನಾಮೀಕರಿಸುವುದು. ೨೦೧೭ ರ ವೃಂದ ಮತ್ತು ನೇಮಕಾತಿ ನಿಯಮಗಳು ೨೦೧೬ ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತ: ೧-೭/೮ ಕ್ಕೆ ನೇಮಕ ಹೊಂದಿದವರನ್ನು PSಖಿ ಎಂದು ಪದನಾಮ ಮಾಡಿ ೧-೫ ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು. ಅರ್ಹ ವಿದ್ಯಾರ್ಹತೆ ಪೂರೈಸಿದ ೨೦೧೬ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲಾ ೧ ರಿಂದ ೮ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯುವವರೆಗೂ ಈ ಮೊದಲಿನಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢ ಶಾಲೆಗೆ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು. ಅರ್ಹ ವಿದ್ಯಾರ್ಹತೆ (ಪದವಿ+ಶಿಕ್ಷಣ ತರಬೇತಿ) ಹೊಂದಿದ ೨೦೧೬ಕ್ಕಿಂತ ಪೂರ್ವದಲ್ಲಿ ನೇಮಕಾತಿ ಆಗಿರುವ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಸೇವಾ ಜೇಷ್ಠತೆಯ ರಕ್ಷಣೆ (ಅಚಿಡಿಡಿಥಿ ಈoಡಿತಿಚಿಡಿಜiಟಿg Seಟಿioಡಿiಣಥಿ) ಯೊಂದಿಗೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಲಾಗಿದೆ.
ಈ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.೧೨ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಮಾಡಲು ಶಿಕ್ಷಕರು ನಿರ್ಧರಿಸಿದ್ದಾರೆ. ಇದಕ್ಕೆ ಸರಕಾರ ಸಕರಾತ್ಮಕವಾಗಿ ಸ್ಪಂದಿಸದಿದ್ದಲ್ಲಿ ರಾಜ್ಯಾದ್ಯಂತ PSಖಿ ಶಿಕ್ಷಕರು ಶಾಲಾ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟ ಮುಷ್ಕರ ಕೈಗೊಳ್ಳಲಾಗುವುದು ಎಂದು ರಾಜ್ಯ ಕೋಶಾಧ್ಯಕ್ಷ ಸುರೇಶ ಶೇಡಶ್ಯಾಳ ಅವರು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.
ಈ ವೇಳೆ ಎ.ಜಿ. ಲಮಾಣಿ, ಜುಬೇರ ಕೆರೂರ, ಬಿ.ಟಿ. ಗೌಡರ, ರವೀಂದ್ರ ಉಗಾರ, ನಿಜು ಮೇಲಿನಕೇರಿ, ಎಮ್.ಎಮ್. ವಾಲಿಕಾರ, ಪುಷ್ಪಾ ಗಚ್ಚಿನಮಠ, ರೇಣುಕಾ ಆಳೂರ, ಎಸ್.ಎಸ್. ಕುಲಕರ್ಣಿ, ಗಿರಿಶ ಗತಾಟೆ, ಟಿ.ಕೆ. ಜಂಬಗಿ, ಆರ್.ಆರ್. ಹುಣಸಿಗಿಡದ, ತಾಲೂಕಾ ಅಧ್ಯಕ್ಷರುಗಳಾದ ಎಸ್.ಎನ್. ಪಡಶೆಟ್ಟಿ, ಸಾಹೇಬಲಾಲ ದಳವಾಯಿ, ಎಚ್.ಎಮ್. ಚಿತ್ತರಕಿ, ವಾಯ್.ಟಿ. ಪಾಟೀಲ, ಆನಂದ ಭೂಸನೂರ, ಎ.ಬಿ. ಧಡಕೆ, ಎಸ್.ಎಸ್. ಸೊನ್ನಗಿ, ಎ.ಎಚ್. ವಾಲಿಕಾರ, ಬಿ.ಎಸ್. ಮಠ, ಎಮ್.ಎಸ್. ಮುಕಾರ್ತಿಹಾಳ, ಬಿ.ಟಿ. ವಜ್ಜಲ, ಬಿ.ಎಸ್. ಮಜ್ಜಗಿ, ಎಸ್.ಡಿ. ಪಾಟೀಲ, ಶಿವಾನಂದ ಮಂಗಾನವರ, ಎಸ್.ಆರ್. ಪಾಟೀಲ ಮತ್ತು ಎಲ್ಲ ತಾಲೂಕುಗಳ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಪ್ರತಿನಿಧಿಗಳು, ಶಿಕ್ಷಕರು ಭಾಗವಹಿಸಿದ್ದರು.