ಆ.19ರಂದು ಶಿವಶರಣ ನುಲಿಯ ಚಂದಯ್ಯ ಜಯಂತಿಅದ್ಧೂರಿ ಮೆರವಣಿಗೆಸಂಜೆವಾಣಿ ವಾರ್ತೆ
ಚಿತ್ರದುರ್ಗ.ಆ.೮; ಆ.19 ರಂದು ಶಿವಶರಣ ನುಲಿಯ ಚಂದಯ್ಯ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು. ಅಂದು ಬೆಳಿಗ್ಗೆ 9 ಗಂಟೆಗೆ ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ನುಲಿಯ ಚಂದಯ್ಯನವರ ಭಾವಚಿತ್ರದ ಮೆರವಣಿಗೆ ನಡೆಸಿ, ನಂತರ ತರಾಸು ರಂಗಮAದಿರದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ.ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಲಾಯಿತು.ಶಿಷ್ಟಚಾರದ ಅನುಸಾರ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಸಿದ್ಧಪಡಿಸಿ ಎಲ್ಲಾ ಜನಪ್ರತಿನಿಧಿಗಳ ನೀಡಿ, ಕಾರ್ಯಕ್ರಮಕ್ಕೆ ಆಹ್ವಾಸಬೇಕು. ನುರಿತ ಉಪನ್ಯಾಸಕರಿಂದ ನುಲಿಯ ಚಂದಯ್ಯ ಅವರ ಕುರಿತು ಉಪನ್ಯಾಸ ಏರ್ಪಡಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.ಸರ್ಕಾರದಿಂದ ಜಯಂತಿ ಆಚರಣೆ ರೂ.50 ಸಾವಿರ ಅನುದಾನ ನೀಡಲಾಗುತ್ತದೆ. ಇದರಲ್ಲಿ ವೇದಿಕೆ ಸಜ್ಜುಗೊಳಿಸುವುದು, ಆಹ್ವಾನ ಪತ್ರಿಕೆ, ಉಪನ್ಯಾಸಕರ ಗೌರವಧನ, ಬ್ಯಾನರ್, ಸಂಗೀತ ಕಾರ್ಯಕ್ರಮ ಹಾಗೂ ಜಯಂತಿ ಆಗಮಿಸುವವರಿಗೆ ಉಪಹಾರದ ವ್ಯವಸ್ಥೆ ಕಲ್ಪಿಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದರು.ಸಭೆಯಲ್ಲಿ ತಹಶೀಲ್ದಾರ್ ಡಾ.ನಾಗವೇಣಿ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಕೊರಮ ಸಮಾಜದ ಅಧ್ಯಕ್ಷ ಕೃಷ್ಣಪ್ಪ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಿದಾನಂದ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಮಾಜದ ಮುಖಂಡರು ಇದ್ದರು.