ತಾಯಿ ಎದೆ ಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಳ
ಸಂಜೆವಾಣಿ ವಾರ್ತೆ
ದಾವಣಗೆರೆ ಆ.8; ಬಾಪೂಜಿ ಆಸ್ಪತ್ರೆ, ಜೆ.ಜೆ.ಎಂ. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಟಿ.ಎಂ. ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ತಾಯಿಯ ಎದೆ ಹಾಲಿನ ಮಹತ್ವ ಹೊಂದಿದ್ದು ತಾಯಿಯ ಎದೆ ಹಾಲು ಕುಡಿಯುವುದರಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಳವಾಗಲಿದೆ. ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ತಡೆಗಟ್ಟುವಿಕೆ, ಮಕ್ಕಳ ಬಾಲಾಪರಾಧಗಳನ್ನು ತಡೆಗಟ್ಟುವಿಕೆ ಕುರಿತು ಮಾಹಿತಿ ನೀಡಿದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ  ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ.ಕರೆಣ್ಣನವರ್ ಮಾತಾನಾಡಿ, ಸ್ತನ್ಯಪಾನದ ಕ್ರಮಬದ್ಧ ನಿಯಮಗಳು ಹಾಗೂ ಮುಂಚೂಣಿ ಕಾರ್ಯಕರ್ತೆಯರಾದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸಮುದಾಯದಲ್ಲಿ ಮಕ್ಕಳ ತಾಯಂದಿರಿಗೆ ಉತ್ತಮ ಮಾಹಿತಿ ಶಿಕ್ಷಣದ ಅರಿವನ್ನು ನೀಡಬೇಕು ಎಂದು ಕರೆ ನೀಡಿದರು.ಜೆ.ಜೆ.ಎಂ ವೈದ್ಯಕೀಯ ಕಾಲೇಜಿನ ಮುಖ್ಯಸ್ಥರು ಹಾಗೂ ಮಕ್ಕಳ ತಜ್ಞರಾದ ಡಾ|| ಮೂಗನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.