ಆ. 12 ರಂದು ಗುಲಬರ್ಗಾ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವ
ಕಲಬುರಗಿ:ಆ.7:ಗುಲಬರ್ಗಾ ವಿಶ್ವವಿದ್ಯಾಲಯದ 42ನೇ ವಾರ್ಷಿಕ ಘಟಿಕೋತ್ಸವವು ಆಗಸ್ಟ್ 12 ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಗುಲಬರ್ಗಾ ವಿಶ್ವವಿದ್ಯಾಲಯದ ಜ್ಞಾನಗಂಗಾ ಆವರಣದಲ್ಲಿ ಜರುಗಲಿದೆ.
ರಾಜ್ಯದ ಘನತೆವೆತ್ತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸುವರು. ರಾಜ್ಯದ ಉನ್ನತ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾಲಯಗಳ ಸಮಕುಲಾಧಿಪತಿಗಳಾದ ಡಾ. ಎಂ.ಸಿ. ಸುಧಾಕರ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಗೋವಾ ಡೋನಾ ಪೌಲಾ ಸಿ.ಎಸ್.ಐ.ಆರ್. ರಾಷ್ಟ್ರೀಯ ಸಾಗರಶಾಸ್ತ್ರ ಸಂಸ್ಥೆಯ ನಿರ್ದೇಶಕ ಪ್ರೊ. ಸುನಿಲ ಕುಮಾರ್ ಸಿಂಗ್ ಅವರು ಘಟಿಕೋತ್ಸವ ಭಾಷಣ ಮಾಡುವರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.