9 ರಂದು ಕ್ವೀಟ್ ಇಂಡಿಯಾ ಚಳವಳಿ ದಿನ ಆಚರಣೆ
ಕಲಬುರಗಿ,ಆ.7-ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಆ.9 ರಂದು ಬೆಳಿಗ್ಗೆ 10 ಗಂಟೆಗೆ ಕ್ವೀಟ್ ಇಂಡಿಯಾ ಚಳುವಳಿ ದಿನವನ್ನು (ಬ್ರಿಟಿಷರೇ ಭಾರತ ಬಿಟ್ಟು ತೋಲಗಿ ಎಂಬ ದಿನ) ಆಚರಣೆ
ಮಾಡಲಾಗುವದು ಎಂದು ಪಕ್ಷದ ಜಿಲ್ಲಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ ತಿಳಿಸಿದ್ದಾರೆ.
ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್, ತಾಲೂಕಾ ಪಂಚಾಂiÀiತ್, ಗ್ರಾಮ ಪಂಚಾಯತ್, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಮಹಾಪೌರರು, ಉಪ ಮಹಾಪೌರರು, ಮಾಜಿ ಮಹಾಪೌರರು, ಮಾಜಿ ಉಪ ಮಹಾಪೌರರು ಹಾಗೂ ಹಾಲಿ ಮತ್ತು ಮಾಜಿ ಸದಸ್ಯರುಗಳು, ಮಹಿಳೆಯರು, ಯುವಕರು, ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.