ಸ್ವತಂತ್ರ ದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಲು ನಿರ್ಧಾರ
ಭಾಲ್ಕಿ:ಆ.7: ಪಟ್ಟಣದ ತಹಸೀಲ ಕಚೇರಿಯಲ್ಲಿ ಮಂಗಳವಾರ ತಹಸೀಲ್ದಾರ ಮಲ್ಲಿಕಾರ್ಜುನ ವಡ್ಡನಕೇರೆಯವರ ಅಧ್ಯಕ್ಷತೆಯಲ್ಲಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ಆ.15 ರಂದು ನಡೆಯಲಿರುವ ಸ್ವಾತಂತ್ರೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಹಸೀಲ್ದಾರ ಮಲ್ಲಿಕಾರ್ಜುನ ವಡ್ಡನಕೇರೆ, ತಾಲೂಕು ಆಡಳಿತದ ವತಿಯಿಂದ ಆ.15 ರಂದು ನಡೆಯಲಿರುವ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಗುವುದು. ನಮ್ಮ ಧಾರ್ಮಿಕ ಎಲ್ಲಾ ಹಬ್ಬಗಳಿಗಿಂತಲೂ ಸ್ವತಂತ್ರ ಹಬ್ಬ ಸರ್ವಶ್ರೇಷ್ಠವಾಗಿದೆ. ನಾವು ಸ್ವಾತಂತ್ರವಾಗಿದ್ದರೆ ಮಾತ್ರ ನಮ್ಮ ಉಳಿದ ಆಚರಣೆಗಳಿಗೆ ಬೆಲೆ ಇದೆ. ಹೀಗಾಗಿ ಸ್ವಾತಂತ್ರೋತ್ಸವವನ್ನು ಅತಿ ವಿಜ್ರಂಭಣೆಯಿಂದ ಆಚರಿಸಲು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಕಾರಬಾರಿ ಮಾತನಾಡಿ, ತಾಲೂಕು ಆಡಳಿತದ ವತಿಯಿಂದ ಆಚರಿಸುವ ಸ್ವಾತಂತ್ರೋತ್ಸವ ನಿಮಿತ್ಯ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಮತ್ತು ಕಲಾವಿದರು ಸೇರಿಕೊಂಡು ಮಹಾತ್ಮರ ಭಾವಚಿತ್ರ ಹಾಗು ಸ್ಥಬ್ದ ಚಿತ್ರಗಳ ಭವ್ಯ ಮೆರವಣಿಗೆ ನಡೆಸಲಾಗುವುದು. ಪಟ್ಟಣದ ಪುರಸಭೆ ಕಚೇರಿಯ ಆವರಣದಿಂದ ಮೆರವಣಿಗೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.
ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ ಮಾತನಾಡಿ, ತಹಸೀಲ ಕಚೇರಿಯ ಆವರಣದಲ್ಲಿ ಧ್ವಜಾರೋಹಣ ನಡೆಸಲಾಗುವುದು. ಹೀಗಾಗಿ ಮೆರವಣಿಗೆ ಆದಷ್ಟು ಬೇಗ ನಡೆಸಿಕೊಂಡು, ಸಮಯಕ್ಕೆ ಸರಿಯಾಗಿ ಧ್ವಜಾರೋಹಣ ನಡೆಸಲು ಅನುವು ಮಾಡಿಕೊಡಬೇಕು. ನಂತರ ಪುರಭವನದ ವೇದಿಕೆಯಲ್ಲಿ ಉಪನ್ಯಾಸ, ಸಾಂಸ್ಕøತಿಕ ಕಾರ್ಯಕ್ರಮ ಸೇರಿದಂತೆ ಸ್ವಾತಂತ್ರ ಸೇನಾನಿಗಳ ಸನ್ಮಾನ ಕಾರ್ಯಕ್ರಮ ನಡೆಯುವವು ಎಂದು ತಿಳಿಸಿದರು. ಹಲವು ಇಲಾಖೆಯ ಅಧಿಕಾರಿಗಳು ಸಭೆಗೆ ಗೈರು ಹಾಜರಿದ್ದ ಕಾರಣ, ವಿವಧ ಸಂಘ ಸಂಸ್ಥೆಗಳ ಮುಖಂಡರು ತಮ್ಮ ಆಕ್ರೋಶ ಹೊರಹಾಕಿರು.
ಸ್ವಾತಂತ್ರೋತ್ಸವ ಸೇರಿದಂತೆ ತಾಲೂಕು ಆಡಳಿತದ ವತಿಯಿಂದ ನಡೆಯುವÀ ಪ್ರತಿಯೊಂದು ಉತ್ಸವಗಳಲ್ಲಿ ಎಲ್ಲಾ ಅಧಿಕಾರಿಗಳು ಹಾಜರಿರಬೇಕು. ಗೈರು ಹಾಜರಾದ ಅಧಿಕಾರಿಗಳ ಮೇಲೆ ತಾಲೂಕು ಆಡಳಿತದ ವತಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು.