ಕಾನೂನು ಅರಿವು ನೆರವು ಕಾರ್ಯಕ್ರಮ
ಹೊಸಪೇಟೆ ಆ 07 : ನಗರದ ಜೆಸೀಸ್ ಶಾಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ-2012ರ ಕಾನೂನು ಅರಿವು ನೆರವು ಕಾರ್ಯಕ್ರಮ ಮಂಗಳವಾರ ಯಶಸ್ವಿಯಾಗಿ ನಡೆಯಿತು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹೇಮಲತಾ ಬಿ. ಹುಲ್ಲೂರ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಭಾರತ ದೇಶದ ಪ್ರಜೆಗಳಾದ ನಾವು ನಮ್ಮ ದೇಶದ ಕಾನೂನನ್ನು ಅರಿತು ಅದನ್ನು ಪಾಲಿಸಬೇಕು. ನಮ್ಮ ಸಂವಿಧಾನ ಒದಗಿಸಿರುವ ಹಕ್ಕುಗಳಿಗೆ ಚ್ಯುತಿ ಬಂದರೆ ಸುಮ್ಮನೆ ಕೂರದೆ ಕಾನೂನಿನ ಸಹಾಯ ಪಡೆದುಕೊಳ್ಳಬೇಕು. ಕಾನೂನುಗಳು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತವೆ ಎಂದರು.
ಬಾಲ್ಯ ವಿವಾಹ ನಿಷೇಧ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ-2012ರ ಬಗ್ಗೆ ಅರಿಯಬೇಕು. ಹದಿಹರೆಯದವರಲ್ಲಿ ಆಕರ್ಷಣೆ ಸಹಜ. ತಂದೆ ತಾಯಿಯ ಗೌರವವನ್ನು ನೆನೆದು ಶ್ರದ್ಧೆಯಿಂದ ಓದುವ ಹವ್ಯಾಸ ಬೆಳೆಸಿಕೊಳ್ಳಿ ಎಂದು ಮಕ್ಕಳಿಗೆ ಸಲಹೆ ನೀಡಿದರು.
ನಂತರ ಮಾತನಾಡಿದ ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಪ್ರಶಾಂತ್ ನಾಗಲಾಪುರ್ ಅವರು, ಹೈಕೋರ್ಟ್ ನಿರ್ದೇಶನದಂತೆ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಕಾನೂನು ಸೇವಾ ಸಮಿತಿಯನ್ನು ರೂಪಿಸಿ ಸಾರ್ವಜನಿಕರಿಗೆ ದೇಶದಲ್ಲಿರುವ ಕಾನೂನನ್ನು ತಿಳಿಸಲು ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಮಕ್ಕಳು ಈ ಕಾನೂನುಗಳ ಬಗ್ಗೆ ಕಲಿತು ಸಾರ್ವಜನಿಕರಿಗೂ ಜಾಗೃತಿ ಮೂಡಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.
ಈ ಸಂಧರ್ಭದಲ್ಲಿ ಜೇಸೀಸ್ ಶಾಲೆಯ ಮುಖ್ಯೋಪಾಧ್ಯಾಯರಾದ ಕೆ.ಬಿ.ಲಿಂಗಪ್ಪ, ಗೌರವಾನ್ವಿತ ಅಪರ ಸಿವಿಲ್ ನ್ಯಾಯಾಧೀಶರಾದ ಅಶೋಕ ಆರ್.ಹೆಚ್., ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಪಿ.ಶ್ರೀನಿವಾಸಮೂರ್ತಿ, ಕಾನೂನು ಪರಿವೀಕ್ಷಣಾಧಿಕಾರಿಗಳಾದ ಶ್ರೀಕಾಂತ್, ವಕೀಲರ ಸಂಘದ ಶ್ವೇತಾಂಭರಿ ಎಸ್.ಪಿ. ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
One attachment • Scanned by Gmail