ಕೋಚಿಮುಲ್ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಸಲು ಒತ್ತಾಯ
ಕೋಲಾರ,ಆ, ೭ – ಕೋಚಿಮುಲ್ ಆಡಳಿತ ಮಂಡಳಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದರು ಚುನಾವಣೆ ನಡೆಸುತ್ತಿಲ್ಲ ಎಂದು ಆರೋಪಿಸಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ ನಾಗರಾಜ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅಕ್ರಂ ಪಾಷಗೆ ಮನವಿ ನೀಡಿ ಒತ್ತಾಯಿಸಿದರು.
ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಆಗಮಿಸಿ ಕೋಚಿಮುಲ್ ಆಡಳಿತ ಮಂಡಳಿಗೆ ಕೂಡಲೇ ಚುನಾವಣೆ ನಡೆಸುವಂತೆ ಆದೇಶವನ್ನು ನೀಡುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ಮಾತನಾಡಿ ಕೋಚಿಮುಲ್ ಆಡಳಿತ ಮಂಡಳಿಯ ಅಧಿಕಾರ ಅವಧಿಯು ಕಳೆದ ಮೇ ೧೨ ಕ್ಕೆ ಮುಕ್ತಾಯವಾಗಿದೆ ಆದರೂ ಆಡಳಿತ ಮಂಡಳಿಯು ಕಾಂಗ್ರೆಸ್ ಸರಕಾರದ ಕೃಪಾ ಪೋಷಿಕ ನಾಟಕ ಮಂಡಳಿ ರೀತಿಯಲ್ಲಿ ವರ್ತಿಸುತ್ತಿದೆ ಆಡಳಿತ ಮಂಡಳಿಯಲ್ಲಿ ಯಾವುದೇ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲು ಅಂಕಾರವಿಲ್ಲ ಈ ಬಗ್ಗೆ ಸರ್ಕಾರವು ಸ್ಪಷ್ಟ ಆದೇಶವನ್ನು ಹೊರಡಿಸಿದೆ ಆದರೂ ವಿಶೇಷ ಸಾಮಾನ್ಯ ಸಭೆ ಸೇರಿದಂತೆ ಹಣಕಾಸಿನ ವ್ಯವಹಾರಗಳನ್ನು ನಡೆಸಿದ್ದಾರೆ ಎಂದು ಆರೋಪಿಸಿದರು.
ಚಿತ್ರದುರ್ಗ ಜಿಲ್ಲಾ ಸಹಕಾರಿ ಡಿಸಿಸಿ ಬ್ಯಾಂಕ್ ಮತ್ತು ಕೋಚಿಮುಲ್ ಸಹಕಾರಿ ಸಂಸ್ಥೆಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕು ಎಂದು ಆದೇಶ ನೀಡಿದರು ಚಿತ್ರದುರ್ಗದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಿದ್ದಾರೆ ಕೋಚಿಮುಲ್ ಆಡಳಿತ ಮಂಡಳಿಗೆ ಯಾಕೆ ಚುನಾವಣೆ ನಡೆಸಲಿಲ್ಲ ಇವತ್ತು ಕೋಚಿಮುಲ್ ಆಡಳಿತ ಮಂಡಳಿಯಲ್ಲಿನ ಏಕಪಕ್ಷೀಯ ನಿರ್ಧಾರದಿಂದ ನೇಮಕಾತಿಯ ಉದ್ದೇಶಕ್ಕಾಗಿ ಇಡಿ ತನಿಖಾ ಸಂಸ್ಥೆಯು ದಾಳಿ ಮಾಡಿದೆ ಇಂತಹ ಘಟನೆಗಳು ಇತಿಹಾಸದಲ್ಲಿ ಯಾವತ್ತೂ ಕೂಡ ನಡೆದಿಲ್ಲ ಒಂದು ಸಹಕಾರಿ ಸಂಸ್ಥೆಗೆ ಹೈಕೋರ್ಟ್ ಆದೇಶವನ್ನು ಪಾಲಿಸಲಿಲ್ಲ ಸರಕಾರದ ಒತ್ತಡದಿಂದಾಗಿ ಜಿಲ್ಲೆಯ ಹೈನುಗಾರಿಕೆಯಿಂದ ಜೀವನ ನಡೆಸುವ ರೈತರನ್ನು ಬೀದಿಗೆ ತರಲಾಗುತ್ತಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಅಕ್ರಂ ಪಾಷಾ, ಮಾತನಾಡಿ ಸಂಬಂಧಿಸಿದವರ ಗಮನಕ್ಕೆ ತಂದು ಮುಂದಿನ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಇದ್ದರು.