ಕೇಂದ್ರ ಸಚಿವೆ ಕರಂದ್ಲಾಜೆಗೆ ‘ಸಿದ್ಧಾಂತ ಶಿಖಾಮಣಿ’ ಕೊಡುಗೆ
ಬೀದರ್: ಆ.6:ಶ್ರಾವಣ ಪ್ರಯುಕ್ತ ಸಿದ್ಧಾಂತ ಶಿಖಾಮಣಿ ಗ್ರಂಥ ಅರ್ಪಣೆ ಅಭಿಯಾನದ ಅಂಗವಾಗಿ ಕೇಂದ್ರ ಸರ್ಕಾರದ ಸಾಂಸ್ಥಿಕ ಪ್ರಾಣಿ ನೀತಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ಅವರು ನವದೆಹಲಿಯಲ್ಲಿ ಕೇಂದ್ರದ ಸೂಕ್ಷ್ಮ ಮತ್ತು ಮಧ್ಯಮ ಉದ್ಯಮಗಳು ಹಾಗೂ ಕಾರ್ಮಿಕ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಸಿದ್ಧಾಂತ ಶಿಖಾಮಣಿ ಗ್ರಂಥ ಕೊಡುಗೆಯಾಗಿ ನೀಡಿದರು.
ಸಿದ್ಧಾಂತ ಶಿಖಾಮಣಿ ಗ್ರಂಥವನ್ನು ಎಲ್ಲೆಡೆ ತಲುಪಿಸಲು ಸೆಪ್ಟೆಂಬರ್ 2ರ ವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಶಿವಯ್ಯ ಸ್ವಾಮಿ ತಿಳಿಸಿದರು.
ಕೇಂದ್ರ ಸಚಿವರು, ರಾಜ್ಯ ಸಚಿವರು, ಲೋಕಸಭೆ ಸದಸ್ಯರು, ವಿದೇಶಿ ರಾಯಭಾರಿಗಳು, ಐಎಎಸ್ ಅಧಿಕಾರಿಗಳು, ವಿಶ್ವವಿದ್ಯಾಲಯಗಳ ಕುಲಪತಿಗಳು ಸೇರಿ 1,008 ಜನರಿಗೆ ಗ್ರಂಥ ವಿತರಿಸಲಾಗುತ್ತಿದೆ ಎಂದು ಹೇಳಿದರು.
ಅಭಿಯಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಕರಂದ್ಲಾಜೆ ಅವರು, ಸಿದ್ಧಾಂತ ಶಿಖಾಮಣಿ ಪವಿತ್ರ ಗ್ರಂಥವಾಗಿದೆ. ಇದನ್ನು ಪ್ರತಿಯೊಬ್ಬರೂ ಪಾರಾಯಣ ಮಾಡಬೇಕು ಎಂದು ತಿಳಿಸಿದರು.