ಪಿಎಸ್‍ಐ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ
ಕಲಬುರಗಿ:ಆ.6: ಯಾದಗಿರಿ ಪೆÇಲೀಸ್ ಇನ್ಸಪೆಕ್ಟರ್ ಪರಶುರಾಮ್ ಸಾವಿಗೆ ಕಾರಣರಾದವರನ್ನು ಕೂಡಲೇ ಬಂಧಿಸಿ, ಪ್ರಕರಣದ ಆಮೂಲಾಗ್ರ ತನಿಖೆಗೆ ಸಿಬಿಐಗೆ ಒಪ್ಪಿಸಬೇಕೆಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಭ್ರಷ್ಟ ಸರ್ಕಾರದ ವರ್ಗಾವಣೆ ದಂಧಗೆ ದಕ್ಷ ಹಾಗೂ ನಿಷ್ಟಾವಂತ ಪಿಎಸ್‍ಐ ಬಲಿಯಾಗಬೇಕಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು. ನಗರ ಠಾಣೆಯ ದಕ್ಷ ಹಾಗೂ ನಿಷ್ಠಾವಂತ ಪೆÇಲೀಸ್ ಇನ್ಸಪೆಕ್ಟರ್ ಪರಶುರಾಮ್ ಸಾವಿಗೆ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಹಾಗೂ ಅವರ ಪುತ್ರ ಪಂಪಣಗೌಡ ಕಾರಣರಾಗಿದ್ದಾರೆ ಎಂದು ಅವರು ಆರೋಪಿಸಿದರು. ಕೂಡಲೇ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಒತ್ತಾಯಿಸಿದರು.
ಪಿಎಸ್‍ಐ ಪರಶುರಾಮ ಅವರ ಅನುಮಾನಸ್ಪದ ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಚನ್ನಾರೆಡ್ಡಿ ತುನ್ನುರು ಹಾಗೂ ಅವರ ಮಗ ಸನ್ನಿಗೌಡ ಅವರನ್ನು ಕೂಡಲೇ ಬಂಧಿಸುವಂತೆ ಎಂದು ಅವರು ಆಗ್ರಹಿಸಿದ್ದರು.ಪ್ರಜಾ ಪ್ರತಿನಿಧಿಗಳಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರಿಂದಲೆ ನನ್ನ ಪತಿ ಸಾವಿಗೀಡಾಗಿದ್ದಾರೆ ಎಂದು ಪತ್ನಿ ಶ್ವೇತಾ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆಯಾಗಬೇಕೆಂದು ಆಗ್ರಹಿಸಿದರು.ಕೂಡಲೇ ಪತ್ನಿ ಶ್ವೇತಾ ಅವರಿಗೆ ಸರಕಾರದಿಂದ ಪರಿಹಾರ ಹಾಗೂ ಸರಕಾರಿ ನೌಕರಿ ನೀಡಬೇಕು.ತುನ್ನೂರ ಅವರನ್ನು ಶಾಸಕ ಸ್ಥಾನವನ್ನು ರದ್ದು ಪಡಿಸಬೇಕೆಂದು ಅವರು ಒತ್ತಾಯಿಸಿದರು.