ಸಿಎಂಗೆ ನೋಟಿಸ್ ನೀಡಿರುವುದು ಅವಸರದ ನಡೆ
ಸಂಜೆವಾಣಿ ನ್ಯೂಸ್
ಮೈಸೂರು: ಆ.06:- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದಲ್ಲಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿರುವುದು ಅವಸರದ ನಡೆ ಎಂದು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅಭಿಪ್ರಾಯಪಟ್ಟರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಜನಾಂದೋಲನ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪು ಮಾಡಿಲ್ಲ ಎಂಬುದು ಬಿಜೆಪಿ ನಾಯಕರಿಗೆ ಗೊತ್ತಿದೆ. ಅವರ ನೈತಿಕತೆ, ಕಳಂಕ ರಹಿತ ವ್ಯಕ್ತಿತ್ವ ಅಳಿಸಲು ಬಿಜೆಪಿ ನಾಯಕರು ರಾಜ್ಯಪಾಲರನ್ನು ಬಳಸಿಕೊಂಡಿz್ದÁರೆ. ಸಿದ್ದರಾಮಯ್ಯ ವ್ಯಕ್ತಿತ್ವಕ್ಕೆ ಬರೆ ಹಾಕಲು ಮುಂದಾಗಿz್ದÁರೆ ಕಿಡಿಕಾರಿದರು.
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸವಾಲೊಡ್ಡುವ ಕಳಂಕರಹಿತ ನಾಯಕ ಸಿದ್ದರಾಮಯ್ಯ ಅವರನ್ನು ಹಣಿಯಲು ಬಿಜೆಪಿ ಎಲ್ಲ ರೀತಿಯಿಂದಲೂ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಅವರ ದನಿ ಅಡಗಿಸಲು ಹೋರಾಟ ಮಾಡುತ್ತಿz್ದÁರೆ ಎಂದು ಆರೋಪಿಸಿದರು.
ಮೇಕೆದಾಟು ಯೋಜನೆ ಜಾರಿಗೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಒಪ್ಪಿಗೆ ಕೊಡಿಸುವಂತೆ ಹೇಳಿರುವ ಕೇಂದ್ರ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಚಂದ್ರಶೇಖರ್, ಅವರೇನು ಪ್ರಧಾನ ಮಂತ್ರಿಯೇ ಎಂದು ಪ್ರಶ್ನಿಸಿದರು. ಮಂಡ್ಯದ ಚುನಾವಣಾ ಪ್ರಚಾರದಲ್ಲಿ ಗೆದ್ದ 24 ಗಂಟೆಯೊಳಗೆ ಮೇಕೆದಾಟು ಯೋಜನೆ ಜಾರಿಗೊಳಿಸುವುದಾಗಿ ಹೇಳಿದ್ದನ್ನು ಕುಮಾರಸ್ವಾಮಿ ಅವರು ಮರೆತಿರುವಂತಿದೆ. ಅಧಿವೇಶನದಲ್ಲಿ ಪ್ರಶ್ನೆ ಮಾಡದ ಅವರು ಯಾವ ರಾಜಕಾರಣ ಮಾಡುತ್ತಿz್ದÁರೆ ಎಂದು ಟೀಕಿಸಿದರು.
ಭ್ರಷ್ಟರಿಂದಲೇ ಹೋರಾಟ: ಮುಡಾ ಹಗರಣ ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್ ಪಾದಯಾತ್ರೆ ಮಾಡುತ್ತಿದ್ದಾರೆ. ಭ್ರಷ್ಟಾಚಾರಿಗಳೇ ಹೋರಾಟ ಮಾಡುತ್ತಿz್ದÁರೆ. ಈ ಹೋರಾಟದ ಪ್ರತಿಯಾಗಿ ಆ.9ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿರುವ ಜನಾಂದೋಲನ ಸಮಾವೇಶ ಯಶಸ್ವಿಗೊಳಿಸಬೇಕು. ಇದು ಕಾಂಗ್ರೆಸ್ ಸರ್ಕಾರದ ಅಳಿವು ಉಳಿವಿನ ಪ್ರಶ್ನೆಯೂ ಆಗಿದೆ ಎಂದು ಹೇಳಿದರು.
ಬಿಜೆಪಿ-ಜೆಡಿಎಸ್ ವಿರುದ್ಧದ ಹೋರಾಟ ಧರ್ಮಯುದ್ಧವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಸೈನಿಕರಾಗಿ ಹೋರಾಟ ಮಾಡಬೇಕಿದೆ. ಮೈಸೂರು ಸಭೆಗೆ ಕೊಡಗು, ಮಂಡ್ಯ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು ಜಿ¯್ಲÉಗಳಿಂದ ಪP್ಷÀದ ಕಾರ್ಯಕರ್ತರು ಬರಲಿz್ದÁರೆ ಎಂದು ಹೇಳಿದರು.
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ, ಮೈಸೂರಿನ ಜನಾಂದೋಲನ ಸಮಾವೇಶದಲ್ಲಿ 2 ಲP್ಷÀ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡುವ ಮೂಲಕ ಜೆಡಿಎಸ್, ಬಿಜೆಪಿಗೆ ತಕ್ಕ ಪ್ರತ್ಯುತ್ತರ ನೀಡಬೇಕು. ಸಿದ್ದರಾಮಯ್ಯ ಅವರಿಗೂ ಮುಡಾ ಹಗರಣಕ್ಕೂ ಸಂಬಂಧ ಇಲ್ಲ. ಕೋರ್ಟ್ ಆದೇಶದಂತೆ ಜಮೀನಿಗೆ ಬದಲಿ ನಿವೇಶನ ಕೊಟ್ಟಿz್ದÁರೆ. ಆದರೆ, ಬಿಜೆಪಿ, ಜೆಡಿಎಸ್ ನಾಯಕರು ಸುಳ್ಳನ್ನು ನೂರು ಬಾರಿ ಹೇಳಿ ಸತ್ಯ ಮಾಡಲು ಹೊರಟಿದ್ದು, ಜನರಿಗೆ ಸತ್ಯ ಹೇಳುವ ಕೆಲಸ ಮಾಡಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ಭಾರತಿ ಶಂಕರ್, ನಗರ ಕಾಂಗ್ರೆಸ್ ಅಧ್ಯP್ಷÀ ಆರ್.ಮೂರ್ತಿ, ವಸ್ತುಪ್ರದರ್ಶನ ಪ್ರಾಧಿಕಾರದ ಅಧÀ್ಯP್ಷÀ ಅಯೂಬ್ ಖಾನ್, ಮುಖಂಡರಾದ ಎಚ್.ಎ.ವೆಂಕಟೇಶ್, ಎಚ್.ವಿ.ರಾಜೀವ್, ಬಿ.ಎಲ್.ಭೈರಪ್ಪ, ಕೆ.ವಿ.ಮ¯್ಲÉೀಶ್, ಪುರುಷೋತ್ತಮ್, ನಾರಾಯಣ, ಪುಷ್ಪಾ ಲತಾ ಚಿಕ್ಕಣ್ಣ, ಬಿ.ಕೆ.ಪ್ರಕಾಶ್, ಮೋದಾಮಣಿ, ಶಿವಣ್ಣ, ಈಶ್ವರ್ ಚಕ್ಕಡಿ ಇದ್ದರು.