ಬಸ್ ಕಂಟೈನರ್ ಡಿಕ್ಕಿ: ೨೦ ಮಂದಿಗೆ ಗಾಯ
ಮಂಡ್ಯ,ಸೆ.೩೦-ನಗರದ ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ ೨೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಮಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು,ಇಬ್ಬರು ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬರುವಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್‌ಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಆಂಬ್ಯುಲೆನ್ಸ್ ಡಿಕ್ಕಿ:
ಆಂಬ್ಯುಲೆನ್ಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನಿಲುವಾಗಿಲು ಗ್ರಾಮದ ಬಳಿ ನಡೆದಿದೆ.
ಹೊಸನಗರ ತಾಲೂಕಿನ ಸೊನ್ಲೆ ಗ್ರಾಮದ ನಿವಾಸಿ ಪ್ರವೀಣ್?(೩೦) ಮೃತ ದುರ್ದೈವಿ. ಕೊಪ್ಪದ ಸರ್ಕಾರಿ ಆಸ್ಪತ್ರೆಗೆ ಸೇರಿದ ಆಂಬ್ಯುಲೆನ್ಸ್ ಬೈಕ್ ನಲ್ಲಿ ಹೋಗುತ್ತಿದ್ದ ಪ್ರವೀಣ್ ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.