ಸಿಎಂಗೆ ರಾಜ್ಯಪಾಲರ ನೋಟಿಸ್ ವಿರೋಧಿಸಿ ಬೃಹತ್ ಪ್ರತಿಭಟನೆ
ಕಲಬುರಗಿ,ಆ.5-ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ರಾಜ್ಯಪಾಲರು ನೋಟಿಸ್ ಜಾರಿ ಮಾಡಿರುವುದನ್ನು ವಿರೋಧಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ನೇತೃತ್ವದಲ್ಲಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಇಂದು ಬೃಹತ್ ಮೆರವಣಿಗೆ ನಡೆಸಿ ನಂತರ ಮಿನಿ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಿಚಾರವನ್ನು ಮುಂದಿಟ್ಟುಕೊಂಡು ಶ್ರೀಮತಿ ಪಾರ್ವತಿ ಅವರಿಗೆ ನೀಡಿದ್ದರೆನ್ನಲಾದ ನಿವೇಶನ ವಿಚಾರವಾಗಿ ರಾಜ್ಯಪಾಲರು ಕೂಲಂಕುಷವಾಗಿ ಅಧ್ಯಯನ ಮಾಡದೇ ಏಕಪಕ್ಷೀಯ ನಿರ್ಣಯವನ್ನು ತೆಗೆದುಕೊಂಡು ಮುಖ್ಯಮಂತ್ರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜ್ಯಪಾಲರು ನೋಟಿಸ್ ಜಾರಿ ಮಾಡಿರುವುದನ್ನು ವಿರೋಧಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ನೇತೃತ್ವದಲ್ಲಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿಮಾನಿಯೊಬ್ಬ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆಯಿತು.
ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರು ಆತನ ಕೈಯಲ್ಲಿದ್ದ ಸೀಮೆಎಣ್ಣೆ ತುಂಬಿದ ಡಬ್ಬಿಯನ್ನು ಕಸಿದುಕೊಂಡರು.