ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯಪಾರಿಗೆ ಪತ್ರ
ವಾಡಿ,ಆ.5-ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಮತ್ತು ಭ್ರಷ್ಟಾಚಾರ ಹೆಚ್ಚಳವಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ರಾಜ್ಯಪಾಲ
ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ.
ಯಾದಗಿರಿ ನಗರ ಠಾಣೆಯ ಪಿಎಸ್‍ಐ ಪರಶುರಾಮ ಅವರು ಅನುಮಾನಾಸ್ಪದವಾಗಿ ಸಾವನಪ್ಪಿದ್ದು, ಈ ಸಂಬಂಧ ಕಾಂಗ್ರೆಸ್ ಶಾಸಕ ಚೆನ್ನಾರಡ್ಡಿ ಪಾಟೀಲ ಮತ್ತು ಅವರ ಮಗ ಪಂಪನಗೌಡ ಅವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಪಿಎಸ್‍ಐ ಪರಶುರಾಮ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಅಧಿಕಾರಿಗಳು ತಮ್ಮ ಕರ್ತವ್ಯ ನಿಭಾಯಿಸಲು ಆಸ್ಪದ ನೀಡದೆ, ಅವರನ್ನು ಮಾನಸಿಕವಾಗಿ ಕಿರುಕುಳ ನೀಡುತ್ತಿರುವ ಪರಿಣಾಮದಿಂದ ಅನೇಕ ಅಧಿಕಾರಿಗಳು ಆತ್ಮಹತ್ಯೆ ಶರಣಾಗುತ್ತಿದ್ದಾರೆ. ಸಚಿವರು ಮತ್ತು ಶಾಸಕರು ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ. ಮುಡಾ, ವಾಲ್ಮೀಕಿ ನಿಗಮ ಹಗರಣದಲ್ಲಿ ಸರ್ಕಾರ ಭಾಗಿಯಾಗಿರುವುದರಿಂದ ಸರ್ಕಾರದ ವಿರುದ್ಧ ಕ್ರಮ ಕೈಗೊಂಡು ರಾಜ್ಯದ ಜನರ ಹಿತರಕ್ಷಣೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.