ದಕ್ಷತೆಯಿಂದ ಕರ್ತವ್ಯ ಪಾಲನೆ ಮಾಡಲು ಎಸ್.ಪಿ ಸೂಚನೆ
ಅಫಜಲಪುರ: ಆ.5:ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸುವ ಮೂಲಕ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಎಂದು ಕಲಬುರಗಿ ಎಸ್.ಪಿ ಅಡ್ಡೂರು ಶ್ರೀನಿವಾಸುಲು ರವರು ಸಿಬ್ಬಂದಿಗಳಿಗೆ ಸೂಚಿಸಿದರು.
ತಾಲೂಕಿನ ದೇವಲ ಗಾಣಗಾಪುರ ಪೆÇಲೀಸ್ ಠಾಣೆಗೆ ಭೇಟಿ ನೀಡಿ ಮಾತನಾಡಿದ ಅವರು ಸಮಾಜದಲ್ಲಿ ಶಾಂತಿ ನೆಲೆಸಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ದಕ್ಷತೆಯಿಂದ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ಹಾಗೂ ಎಲ್ಲರೂ ನಿಮ್ಮ ಆರೋಗ್ಯದ ಕಡೆ ಗಮನ ಹರಿಸಿ ಎಂದು ತಿಳಿಸಿದರು.
ನಂತರ ಠಾಣಾ ಆವರಣದಲ್ಲಿ ಪರಿಸರ ಜಾಗೃತಿ ಮೂಡಿಸಿ ಸಸಿ ನೆಡಲಾಯಿತು ಹಾಗೂ ಕಳೆದು ಹೋದ 10 ಮೊಬೈಲ್ ಗಳನ್ನು ಸಿಇಐಆರ್ ಪೆÇೀರ್ಟಲ್ ಮೂಲಕ ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸಲಾಯಿತು.
ಈ ವೇಳೆ ಡಿವೈಎಸ್ಪಿ ಗೋಪಿ ಬಿ.ಆರ್, ಪಿ.ಎಸ್.ಐ ರಾಹುಲ್ ಪವಾಡೆ ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.