ಕನಿಷ್ಠ ಬೆಂಬಲ ಬೆಲೆಗೆ ಮನವಿ
ನವಲಗುಂದ,ಆ೫: ಉಳ್ಳಾಗಡ್ಡಿ ಬೆಳೆಗೆ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ) ದರ ನಿಗದಿಪಡಿಸಿ ಅವಶ್ಯವಿದ್ದಲ್ಲಿ ರಫುö್ತ ಮಾಡಲು ಅವಕಾಶ ನೀಡಬೇಕು’ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಕೇಂದ್ರ ತಂಡಕ್ಕೆ ಮನವಿ ಮಾಡಿದರು.
ಕೇಂದ್ರ ಸರ್ಕಾರದ ಅಧ್ಯಯನ ತಂಡವು ನವಲಗುಂದ ವಿಧಾನಸಭಾ ಕ್ಷೇತ್ರದ ಶಿರಗುಪ್ಪಿ ಗ್ರಾಮದ ರೈತ ಅಣ್ಣಿಗೇರಿ ಅವರು ಬೆಳೆದ ಈರುಳ್ಳಿ ಬೆಳೆ ವೀಕ್ಷಣೆಗೆ ಬಂದಿದ್ದ ವೇಳೆ ಮಾತನಾಡಿದ ಅವರು `ಕರ್ನಾಟಕ ಹಾಗೂ ಮಹಾರಾಷ್ಟç ರಾಜ್ಯಗಳಲ್ಲಿ ರೈತರು ಈರುಳ್ಳಿ ಬೆಳೆಯುವುದನ್ನು ಕಡಿಮೆ ಮಾಡುತ್ತಿದ್ದಾರೆ. ಇದರಿಂದ ದೇಶದಲ್ಲಿ ಈರುಳ್ಳಿಯ ಅಭಾವ ಸೃಷ್ಟಿಯಾಗುವ ಸಂಭವವಿದೆ ಎಂದರು.
ರೈತರು, ಸ್ಥಳೀಯ ಜನಪ್ರತಿನಿಧಿಗಳಿಂದ ಅಭಿಪ್ರಾಯ ಪಡೆದು ಯೋಜನೆ ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ’ ಎಂದು ಭಾರತ ಸರ್ಕಾರದ ಕೃಷಿ ಹಾಗೂ ರೈತರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಮನೋಜ ಕೆ. ಹೇಳಿದರು. ಹಾಗೂ ಹುಬ್ಬಳ್ಳಿ ಎಪಿಎಂಸಿಯಲ್ಲಿ ದಲ್ಲಾಳಿಗಳ ಹಾಗೂ ಖರೀದಿದಾರರ ಸಭೆಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಕಾಶಿನಾಥ ಭದ್ರಣ್ಣವರ, ಹುಬ್ಬಳ್ಳಿ ತಹಶೀಲ್ದಾರ್ ಪ್ರಕಾಶ ನಾಶಿ, ಪೊಲೀಸ್ ಇನ್‌ಸ್ಪೆಕ್ಟರ್ ಮುರಗೇಶ ಚನ್ನಣ್ಣವರ, ಸಹಾಯಕ ನಿರ್ದೇಶಕ ಉಮೇಶ ಪಾಟೀಲ, ರೈತರಾದ ಮಹಾಬಳೇಶ ಅಣ್ಣಿಗೇರಿ, ಪ್ರಕಾಶಗೌಡ ಹನಮರಡ್ಡಿ, ಶಿವಣ್ಣ ಹುಬ್ಬಳ್ಳಿ, ತಾಜುದ್ದೀನ್ ಮುಲ್ಲಾನವರ, ಕಾಂತಪ್ಪ ಅಣ್ಣಿಗೇರಿ ಇತರರು ಇದ್ದರು.