ಕಾಂಗ್ರೆಸ್ ಸರ್ಕಾರ ಅಸ್ಥಿತರಗೊಳಿಸುವ ಹುನ್ನಾರ; ಕಾಂಗ್ರೆಸ್ ಆರೋಪ
ಸಂಜೆವಾಣಿ ವಾರ್ತೆ
ಹರಪನಹಳ್ಳಿ.ಆ.೫: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್ ಹುನ್ನಾರ ನಡೆಸಿವೆ, ಇದರಿಂದ ಸಿದ್ದರಾಮಯ್ಯನವರಿಗೆ ತೊಂದರೆ ಉಂಟಾದರೆ ರಾಜ್ಯದಲ್ಲಿ ರಕ್ತಪಾತವಾಗುತ್ತದೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಅಂಜಿನಪ್ಪ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೂಡ ಸೈಟು ಹಂಚಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರವಿಲ್ಲದಿದ್ದರೂ ಅವರ ಮೇಲೆ ಸುಳ್ಳು ಆರೋಪ ಹೊರಿಸಿ ಸಿಎಂ ಸ್ಥಾನದಿಂದ ಕೆಳಗಿಳಿಸುವ ಷಡ್ಯಂತ್ರ ರೂಪಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯನವರು ಕಳೆದ ೪೦ ವರ್ಷದಿಂದ ತಮ್ಮ ರಾಜಕೀಯ ಜೀವನದಲ್ಲಿ ಯಾವುದೆ ಕಪ್ಪು-ಚುಕ್ಕಿ ಇಲ್ಲದೇ ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ ಇದನ್ನು ಸಹಿಸಿಕೊಳ್ಳ ಲಾಗದವರು ಅವರನ್ನು ಕೆಳಗಿಳಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ ಅವರ ಪ್ರಯತ್ನ ಸಫಲವಾಗುದು ಎಂದು ದೂರಿದರು.ರಾಜ್ಯದ ಜನತೆಯ ಆಶೀರ್ವಾದಿಂದ ಕಾಂಗ್ರೆಸ್ ಪಕ್ಷ ೧೩೬ ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಿದೆ ಇಂತಹ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರದ ಬಿಜೆಪಿ ನಾಯಕರು ರಾಜ್ಯಪಾಲರ ಮೂಲಕ ಒತ್ತಡ ಹೇರುತ್ತಿದ್ದಾರೆ, ಇದು ಹೀಗೆ ಮುಂದುವರೆದರೆ ಕೇಂದ್ರ ಬಿಜೆಪಿ ನಾಯಕರ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.ತಾಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ, ವಕೀಲ ಗೋಣಿಬಸಪ್ಪ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಜೀವನದಲ್ಲಿ ಒಂದು ಕಪ್ಪು-ಚುಕ್ಕೆ ಇಲ್ಲದೇ ಪಾರದರ್ಶಕವಾಗಿ ಆಡಳಿತ ನಡೆಸಿಕೊಂಡು ಬಂದಿದ್ದಾರೆ, ಇವರ ಮೇಲೆ ಕೇಳಿ ಬಂದಿರುವ ಆರೋಪ ಸತ್ಯಕ್ಕೆ ದೂರವಾಗಿದೆ, ಇವರನ್ನು ಕೆಳಗಿಳಿಸುವ ಪ್ರಯತ್ನಕ್ಕೆ ಕೈ ಹಾಕಿದರೆ ರಾಜ್ಯ ಹೊತ್ತಿ ಉರಿಯುತ್ತದೆ ಎಂದು ಹೇಳಿದರು.ಮುಖಂಡ ಟಿ.ವೇಂಕಟೇಶ ಮಾತನಾಡಿ ಬಿಜೆಪಿ-ಜೆಡಿಎಸ್ ಪಕ್ಷದ ನಾಯಕರು ರಾಜಕೀಯ ದುರುದ್ದೇಶದಿಂದ ಸಿದ್ದರಾಮಯ್ಯನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ, ಸಿದ್ದರಾಮಯ್ಯ ಯಾವತ್ತು ಕಾನೂನು ಬಾಹಿರವಾಗಿ ನಡೆದುಕೊಂಡಿಲ್ಲ ಕಾನೂನು ರೀತಿಯಲ್ಲಿ ಮೂಡದಲ್ಲಿ ನಿವೇಶನ ಪಡೆದುಕೊಂಡಿದ್ದಾರೆ ಎಂದು ಹೇಳಿದರು.