ಲೇಖಕರೆಂದರೆ ಮನುಷ್ಯರಾದಂತೆ: ಅರವಿಂದ ಮಾಲಗತ್ತಿ
ಸಂಜೆವಾಣಿ ನ್ಯೂಸ್
ಮೈಸೂರು: ಆ.05:- ಬದ್ಧತೆ ಎಲ್ಲರಲ್ಲಿಯೂ ಬರುತ್ತಿದೆ ಎಂದರೆ ಅವರು ಕವಿಗಳಾಗುತ್ತಾರೆ ಎಂದರ್ಥ. ಲೇಖಕರಾಗುವುದು ಎಂದರೆ ಮನುಷ್ಯರಾಗುವುದು ಎಂದರ್ಥ ಎಂದು ಹಿರಿಯ ಸಾಹಿತಿ ಡಾ.ಅರವಿಂದ ವಾಲಗತ್ತಿ ವಿಶ್ಲೇಷಿಸಿದರು.
ವಿಜಯನಗರ 1ನೇ ಹಂತದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಭವನದಲ್ಲಿ ಅಕ್ಷರ ನಾದ ಪಬ್ಲಿಕೇಶನ್ಸ್-ಎ.ಎಸ್.ಟಿ.ಆರ್, ಅಕ್ಷರ-ಕಲೆ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಆಯೋಜಿಸಿದ್ದ ಕವಿ ಕಾವ್ಯ ಕಥಾ ಸಂಗಮ ಮೊದಲ ಆವೃತ್ತಿ-2024, ಅಕ್ಷರ ನಾದದ ಮೊದಲ ವಾರ್ಷಿಕೋತ್ಸವ ಹಾಗೂ 38 ಕೃತಿಗಳ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಂತ್ರಜ್ಞಾನದ ಒಳಗಿನ ಸಾಹಿತ್ಯ ದಾಖಲಾರ್ಹವೇ ಎಂದರೆ ಅಲ್ಲ ಎಂದೇ ಹೇಳಬೇಕು. ಆದರೆ, ಮುದ್ರಣ ವಾಧ್ಯಮ ಹೆಚ್ಚು ಕಾಲ ನೆಲೆ ನಿಲ್ಲುವಂತೆ ವಾಡುತ್ತದೆ. ಜ್ಞಾನವೇ ದೊಡ್ಡದು. ನಿಮ್ಮ ಬರವಣಿಗೆಯಲ್ಲಿ ಅನುಭವಕ್ಕೆ ಆದ್ಯತೆ ಕೊಡಿ. ನಿಮ್ಮ ಅನುಭವದ ಶಕ್ತಿಯನ್ನು ಬರವಣಿಗೆಯಲ್ಲಿ ಹಂಚಿ ಎಂದು ಪ್ರತಿಪಾದಿಸಿದರು.
ಜಗತ್ತು ತಂತ್ರಜ್ಞಾನದ ಜತೆಗೆ ತೊಡಗಿಸಿಕೊಂಡಿದೆ. ಹಾಗೆ ನೋಡಿದರೆ ಎಲ್ಲರೂ ಲೇಖಕರೇ. ಇಂತಹ ಎಷ್ಟು ಮಂದಿ ಬಂದರೂ ಕಡಿಮೆ. ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಸಾಕಷ್ಟು ಮಂದಿ ಸಿಗುತ್ತಾರೆ. ಆದರೆ, ಪ್ರಕಾಶನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದವರು ವಿರಳ ಎಂದರು.
ಕೆ.ಎಸ್.ಶ್ರೀಕಾವ್ಯ ಪ್ರಾರ್ಥನಾ ಗೀತೆ ಹಾಡಿದರು. ತಾರಾ ಸಂತೋಷ್ ಮೇರವಾಡೆ ಸ್ವಾಗತಿಸಿದರು. ಮೈಸೂರು ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿಗಳಾದ ಡಾ.ಮಂಜುಳಾ ಪಾವಗಡ, ಸಿದ್ದನಕೊಪ್ಪಲು ಕುವಾರ್, ಡಿ.ಪದ್ಮನಾಭ, ನಟ ಸ್ಟೈಲ್ ಶಿವಕುವಾರ್, ಪಬ್ಲಿಕೇಷನ್ ಅಧ್ಯಕ್ಷರಾದ ಡಾ.ಶ್ರುತಿ ಮಧುಸೂದನ್, ಉಪಾಧ್ಯಕ್ಷ ಮಧುಸೂದನ್ ಕೆ.ಆಚಾರ್, ಜಿಲ್ಲಾ ಕಸಾಪ ಉಪಾಧ್ಯಕ್ಷ ಡಾ.ಟಿ.ತ್ಯಾಗರಾಜು ಇತರರು ಹಾಜರಿದ್ದರು.