ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುಗೆ ಸ್ವಾಗತ: ಸಿ.ಜಿ.ರವಿ
ಸಂಜೆವಾಣಿ ವಾರ್ತೆ
ಪಿರಿಯಾಪಟ್ಟಣ : ಆ.05:- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಸ್ವಾಗತಾವಾಗಿದೆ ಎಂದು ಆದಿ ಜಂಬಾವ ಮಾದಿಗ ಕ್ಷೇಮಾಭಿವೃದ್ಧಿ ಸಮಿತಿ ತಾಲೂಕು ಅಧ್ಯಕ್ಷ ಸಿ.ಜಿ.ರವಿ ತಿಳಿಸಿದರು.
ಪಟ್ಟಣದ ತಾಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸುಪ್ರೀಂ ಕೋರ್ಟಿನ ಏಳು ಸದಸ್ಯರ ಪೀಠವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಳ ಮೀಸಲಾತಿಯನ್ನು ನೀಡುವಂತ್ತೆ ಐತಿಹಾಸಿಕ ತೀರ್ಪನ್ನು ನೀಡಿರುವುದು ಸ್ವಾಗತರ್ಹ ಆಗಾಗಿ ಸುಪ್ರೀಂಕೋರ್ಟಿಗೆ ಅಭಿನಂದನೆ ಸಲ್ಲಿಸುತ್ತೇನೆ.ಈ ಆದೇಶದಂತ್ತೆ ರಾಜ್ಯ ಸರ್ಕಾರ ಅತೀ ಶೀಘ್ರದಲ್ಲೇ ಒಳಮಿಸಲಾತಿ ಜಾರಿಗೊಳಿಸಬೇಕಾಗಿ ಮನವಿ ಮಾಡಿದರು.
ಸಂಘದ ಗೌರವಾಧ್ಯಕ್ಷ ಭೂತನಹಳ್ಳಿ ಶಿವಣ್ಣ ಮಾತನಾಡಿ ಮಾಜಿ ಮುಖ್ಯಮಂತ್ರಿಯಾದ ಎಸ್.ಎಂ. ಕೃಷ್ಣ ರವರು ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗವನ್ನು ರಚಿಸಿದ್ದರು. ನಂತರ ಬಂದ ಮುಖ್ಯಮಂತ್ರಿಗಳು ಈ ಆಯೋಗದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದರು ಅದರಂತೆ ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೂಡ ಒಳ ಮೀಸಲಾತಿಯ ವರ್ಗೀಕರಣಕ್ಕೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸನ್ನು ಮಾಡಿದ್ದರು.ಇದರೊಂದಿಗೆ ಮಾದಿಗ ಸಮುದಾಯದ ಮಂದಕೃಷ್ಣ ಮಾದಿಗ ರವರ ಸತತ ಹೋರಾಟದ ಫಲವಾಗಿ ಸುಪ್ರೀಂಕೋರ್ಟ್ ಇಂದು ಒಳ ಮೀಸಲಾತಿಯನ್ನು ನೀಡಬಹುದು ಎಂದು ಆದೇಶ ನೀಡಿದೆ. ರಾಜ್ಯ ಸರ್ಕಾರ ಅತೀ ಶೀಘ್ರದಲ್ಲೇ ಮೀಸಲಾತಿ ವರ್ಗಿಕರಣ ಮಾಡಿ ನೈಜ ಸಮಾನತೆಯನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು.
ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಆರ್.ಸಿ. ಚಂದ್ರು ಮಾತನಾಡಿ ದಲಿತ ಸಮುದಾಯದ ಒಳ ಮೀಸಲಾತಿಗಾಗಿ ಅನೇಕ ವರ್ಷಗಳ ಕಾಲ ಅನೇಕ ಮಹನೀಯರು ಹೋರಾಟ ಮಾಡಿದ್ದಾರೆ. ಈ ಆದೇಶದ ಮೂಲಕ ಅವರೆಲ್ಲರಿಗೂ ಸಾಮಾಜಿಕ ನ್ಯಾಯಕ್ಕೆ ಫಲ ಸಿಕ್ಕಂತಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಕುಮಾರ್ ದೇಪುರ್, ಕಾರ್ಯದರ್ಶಿ ರಮೇಶ್ ಮರದೂರು, ಖಜಾಂಚಿ ಜಯ ಸ್ವಾಮಿ ಹಾರನಹಳ್ಳಿ, ಮುಖಂಡರಾದ ನಾರಾಯಣ, ವಕೀಲ ರಾಜಣ್ಣ, ಲೋಕೇಶ್ ಹೊನ್ನೇನಹಳ್ಳಿ, ಸೋಮಣ್ಣ ಹಾಜರಿದ್ದರು.