ಕನ್ನಡಗಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರಾವಣ ಸಂಭ್ರಮ
ಕಲಬುರಗಿ:ಆ.4: ಕಾಳಗಿ ತಾಲೂಕಿನ ಸುಕ್ಷೇತ್ರ ಕನ್ನಡಗಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಭಾನುವಾರ ಅಮವಾಸ್ಯೆ ಮತ್ತು ಶ್ರಾವಣ ಪ್ರಾರಂಭೋತ್ಸವ ನಿಮಿತ್ಯ ಅಸಂಖ್ಯಾತರ ಭಕ್ತರು ದೇವಸ್ಥಾನಕ್ಕೆ ಆಗಮಿಸಿ, ದರ್ಶನ ಪಡೆದರು.
ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನದ ಸಮಿತಿಯ ಅಧ್ಯಕ್ಷ ಸುಭಾಷ ಮಾಲಿಪಾಟೀಲ, ಪ್ರಮುಖರಾದ ಎಚ್.ಬಿ.ಪಾಟೀಲ, ಶಿವಯೋಗೆಪ್ಪಾ ಎಸ್.ಬಿರಾದಾರ ಸೇರಿದಂತೆ ಮುಂತಾದವರು ಇದ್ದರು.