ಕಣ್ಣಿ ತರಕಾರಿ ಮಾರುಕಟ್ಟೆಗೆ ಶಾಸಕ ಅಲ್ಲಮಪ್ರಭು ಭೇಟಿ, ಕಾಮಗಾರಿ ಪರಿಶೀಲನೆ
ಕಲಬುರಗಿ,ಆ.4-ನಗರದ ಎಂ.ಎಸ್.ಕೆ.ಮಿಲ್ ಬಳಿ ನೂತನವಾಗಿ ನಿರ್ಮಿಸಲಾಗುತ್ತಿರುವ ಕಣ್ಣಿ ತರಕಾರಿ ಮಾರುಕಟ್ಟೆಗೆ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಭೇಟಿ ನೀಡಿ ಸ್ಥಳ ಪರೀವಿಕ್ಷಣೆ ಮಾಡಿ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದರು.
ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಲೋಕಾರ್ಪಣೆಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್, ಲಿಂಗರಾಜ್ ಕಣ್ಣಿ, ಕುಡಾ ಸಹಾಯಕ ಕಾರ್ಯಪಾಲಕ ಅಭಿಯಂತರರು, ಶಾಖಾಧಿಕಾರಿಗಳು ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯ ಪಾಲಕ ಅಭಿಯಂತರರು ಶಾಖಾಧಿಕಾರಿಗಳು ಹಾಜರಿದ್ದರು.