ಪಿಎಸ್‍ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣ ಯಾದಗಿರಿಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ತಂಡ
ಯಾದಗಿರಿ,ಆ.4-ಯಾದಗಿರಿ ಸೈಬರ್ ಠಾಣೆ ಪಿಎಸ್‍ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವರ್ಗಾಯಿಸಿದ ಹಿನ್ನೆಲೆಯಲ್ಲಿ ಸಿಐಡಿ ಡಿಎಸ್‍ಪಿ ಪುನೀತ್ ನೇತೃತ್ವದ ತಂಡ ಇಂದು ಯಾದಗಿರಿಗೆ ಆಗಮಿಸಿದೆ.
ಪಿಎಸ್‍ಐ ಪರಶುರಾಮ ಅವರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ಅವರ ಪತ್ನಿ ಶ್ವೇತಾ ಅವರು ತಮ್ಮ ಪತಿಯ ಸಾವಿಗೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ ಮತ್ತು ಅವರ ಪುತ್ರ ಹಂಪನಗೌಡ ಕಾರಣ ಎಂದು ಆರೋಪ ಮಾಡಿದ್ದರು. ಶ್ವೇತಾ ಅವರು ನೀಡಿದ ದೂರನ್ನು ಆಧರಿಸಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ ಮತ್ತು ಪುತ್ರ ಹಂಪನಗೌಡ ವಿರುದ್ಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ನಿನ್ನೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಇಂದು ಯಾದಗಿರಿಗೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.