ಮನೆಯಲ್ಲಿ ಚಿನ್ನಾಭರಣ ಕಳವು : ಇಬ್ಬರು ಯುವಕರ ಬಂಧನ!
ಸಂಜೆವಾಣಿ ವಾರ್ತೆ
ಶಿವಮೊಗ್ಗ, ಆ. 3: ಮನೆಯೊಂದರಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ ಘಟನೆ ನಡೆದಿದೆ.ಶಿವಮೊಗ್ಗದ ಚಿಕ್ಕಲ್ ಬಡಾವಣೆ ನಿವಾಸಿ ಮೊಹಮ್ಮದ್ ರಫೀಕ್ ಯಾನೆ ಕಾಣ (25) ಮತ್ತು ಬಾಪೂಜಿನಗರದ ನಿವಾಸಿ ಅತಾವುಲ್ಲಾ (24) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.ಆರೋಪಿಗಳಿಂದ ಅಂದಾಜು 7,62,000 ರೂ. ಮೌಲ್ಯದ 127 ಗ್ರಾಂ ತೂಕದ, ಕಳವು ಮಾಡಿದ್ದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಕಳೆದ 15-7-2022 ರಂದು ಶಿವಮೊಗ್ಗದ ಬಾಪೂಜಿ ನಗರದ ನಿವಾಸಿ ದಸ್ತಗೀರ್ ಖಾನ್ ಯಾನೆ ಬಾಬು (47) ಎಂಬುವರ ಮನೆಯಲ್ಲಿ ಕಳವು ಕೃತ್ಯ ನಡೆದಿತ್ತು. ಬಾಗಿಲ ಬೀಗ ಮುರಿದು ಒಳ ಪ್ರವೇಶಿಸಿ, ಚಿನ್ನಾಭರಣ ಮತ್ತು ಹಣ ಕಳವು ಮಾಡಲಾಗಿತ್ತು. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಡಿವೈಎಸ್ಪಿ ಬಾಬು ಆಂಜನಪ್ಪ ಮೇಲ್ವಿಚಾರಣೆಯಲ್ಲಿ ಇನ್ಸ್’ಪೆಕ್ಟರ್ ಎಂ. ಎಸ್. ದೀಪಕ್, ಸಬ್ ಇನ್ಸ್’ಪೆಕ್ಟರ್ ಗಳಾದ ಕುಮಾರ್, ಸಿ.ಆರ್.ಕೊಪ್ಪದ್ ಹಾಗೂ ಸಿಬ್ಬಂದಿಗಳಾದ ಎಎಸ್ಐ ಹರ್ಷ, ಹೆಚ್.ಸಿ. ಗಳಾದ ಅಣ್ಣಪ್ಪ, ನಾಗರಾಜ್, ಸಿಪಿಸಿಗಳಾದ ಪ್ರಕಾಶ್, ಗೊರವರ ಅಂಜಿನಪ್ಪ, ಕಿಶೋರ, ಜಯಶ್ರೀ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.