ಹರಪನಹಳ್ಳಿಯಲ್ಲಿ ಅಮವಾಸ್ಯೆ ಪ್ರಯುಕ್ತ ವಿಶೇಷ ಪೂಜೆ
ಸಂಜೆವಾಣಿವಾರ್ತೆ
ಹರಪನಹಳ್ಳಿ.ಆ.೪; ಶ್ರಾವಣ ಹಾಗೂ ಭೀಮನ ಅಮವಾಸ್ಯೆ ಪ್ರಯುಕ್ತ ತಾಲೂಕಿನ ವಿವಿಧ ಕಡೆಗಳಲ್ಲಿ ಇರುವ ಪ್ರಮುಖ ದೇಗುಲಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.ಭಾನುವಾರವಾದ್ದರೀಂದ ದೇವಸ್ತಾನಗಳಿಗೆ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿರುವುದು ಕಂಡು ಬಂತು.ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ದೇವಸ್ಥಾನ, ಉಚ್ಚಂಗಿದುರ್ಗದ ಉಚ್ಚೆಂಗೆಮ್ಮ ದೇವಸ್ಥಾನ, ನೀಲಗುಂದ ಭೀಮೇಶ್ವರ, ಚಿಗಟೇರಿ ನಾರದಮುನಿ ಸ್ವಾಮಿ, ಪಟ್ಟಣದ ಗೋಕರ್ಣೆಶ್ವರ ದೇವಸ್ಥಾನ ಸೇರಿದಂತೆ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ, ಹೂವಿನ ಅಲಂಕಾರ ಮಾಡಲಾಗಿತ್ತು.