ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಮಂಜುನಾಥ್ ಸಲಹೆ
ಸಂಜೆವಾಣಿ ವಾರ್ತೆ
ಹನೂರು ಆ 4 :- ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಯಾವುದೇ ಲೋಪದೋಷಗಳು ಇಲ್ಲದೆ ಆಯಾ ಇಲಾಖೆ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಕರೆಯಲಾಗಿದ್ದ ರಾಷ್ಟ್ರೀಯ ಹಬ್ಬಗಳ ಆಚರಣೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹನೂರು ವಿಧಾನಸಭಾ ಕ್ಷೇತ್ರ ಗುಡ್ಡಗಾಡು ಪ್ರದೇಶ ದಟ್ಟ ಅರಣ್ಯಗಳಿಂದ ಕೂಡಿರುವ ಶೇಕಡ 70 ಅರಣ್ಯ ಪ್ರದೇಶವೇ ಇರುವುದರಿಂದ ಅರಣ್ಯ ಇಲಾಖೆ ಮುಖ್ಯವಾಗಿ ಮೂರು ವಿಭಾಗಗಳ ಹಿರಿಯ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಾತಂತ್ರ ದಿನಾಚರಣೆ ಯಶಸ್ವಿಗೊಳಿಸಬೇಕು.
ಜೊತೆಗೆ ಆಯಾ ಇಲಾಖೆ ತಮಗೆ ವಹಿಸಿದ ಜವಾಬ್ದಾರಿ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳು ಬಾರದಂತೆ ಕ್ರಮ ಕೈಗೊಳ್ಳುವ ಮೂಲಕ ಅಧಿಕಾರಿ ಸಿಬ್ಬಂದಿ ವರ್ಗದವರು ಕ್ರಮ ಕೈಗೊಳ್ಳಬೇಕು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು.
ವಿದ್ಯುತ್ ಇಲಾಖೆ ಕಾರ್ಯಕ್ರಮದ ದಿನ ವಿದ್ಯುತ್ ದೀಪ ಆಲಂಕಾರ ಮಾಡುವ ಮೂಲಕ ಕ್ರಮ ಕೈಗೊಳ್ಳಬೇಕು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು ಬರುವಂತ ಮಕ್ಕಳಿಗೆ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯುವುದರಿಂದ ಯಾವುದೇ ಸಮಸ್ಯೆಗಳು ಆಗದಂತೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುಬೇಕು.
ಶೌಚಾಲಯಗಳ ವ್ಯವಸ್ಥೆ ಇರುವುದರ ಜೊತೆಗೆ ತಾತ್ಕಾಲಿಕ ಶೌಚಾಲಯ ವ್ಯವಸ್ಥೆಯನ್ನು ಸಹ ಮಾಡಬೇಕಾಗಿದೆ ಒಟ್ಟಾರೆ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವನ್ನು ಹಬ್ಬದಂತೆ ಆಚರಿಸಲು ಪ್ರತಿಯೊಬ್ಬ ಇಲಾಖೆ ಅಧಿಕಾರಿ ಸಿಬ್ಬಂದಿ ವರ್ಗದವರು ಶಿಸ್ತಿನಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ತಾಲೂಕು ತಹಶೀಲ್ದಾರ್ ವೈ.ಕೆ. ಗುರುಪ್ರಸಾದ್, ತಾಲೂಕ್ ಪಂ. ಕಾರ್ಯಾ ನಿರ್ವಹಣಾಧಿಕಾರಿ ಉಮೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ನಂಜಮಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ಇನ್ಸ್ಪೆಕ್ಟರ್ ಶಶಿಕುಮಾರ್ , ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್, ಕೃಷಿ ಇಲಾಖೆ ಅಧಿಕಾರಿ ನಾಗೇಂದ್ರ, ಗ್ರಾಮ ಆಡಳಿತಧಿಕಾರಿ ಶೇಷಣ್ಣ, ವಿಷಯ ನಿರ್ವಾಹಕರು ಕಾವ್ಯ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.